Site icon PowerTV

ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯ

ಕೋಲಾರ : ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯ ಮಾಡಿರುವ ಘಟನೆ ಕೋಲಾರದ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ನಡೆದಿದೆ.

14 ವರ್ಷದ ಬಾಲಕಿ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಹೊಟ್ಟೆ ನೋವು ಎಂದ ಬಾಲಕಿಯನ್ನು ವೈದ್ಯರ ಬಳಿ ತೋರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯು ಗರ್ಭಿಣಿ ಆಗಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.

ಶಿಕ್ಷಕ ಶಿವಕುಮಾರ್ ಬೆದರಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಬಾಲಕಿ ಮಾಹಿತಿ ನೀಡಿದ್ದಾಳೆ. ಆರೇಳು ತಿಂಗಳಿನಿಂದಲೂ ದೌರ್ಜನ್ಯ ನಡೆದ ಬಗ್ಗೆ ಬಾಲಕಿ ವಿವರಿಸಿದ್ದಾಳೆ. ಶಿಕ್ಷಕ ಶಿವಕುಮಾರ್​​ನನ್ನು ಬಂಧಿಸಿ, ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Exit mobile version