Site icon PowerTV

ಸ್ಪಂದನಾ ಮರಣೋತ್ತರ ಪರೀಕ್ಷೆ ಮುಕ್ತಾಯ : ಬಿ.ಕೆ ಹರಿಪ್ರಸಾದ್

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ರಿಪೋರ್ಟ್ ಬಂದ ತಕ್ಷಣ ಮಾಧ್ಯಮಕ್ಕೆ ಕೊಡ್ತೀವಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾಳೆ ರಾತ್ರಿ ವೇಳೆಗೆ ಸ್ಪಂದನಾ ಪಾರ್ಥಿವ ಶರೀರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. ವಿಶೇಷ ವಿಮಾನದ ವ್ಯವಸ್ಥೆಯನ್ನ ಮಾಡಲಾಗಿದೆ. ಬುಧವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.

ಇನ್ನೂ, ಈವರೆಗೆ ಸ್ಪಂದನಾ ಅಂತ್ಯಕ್ರಿಯೆ ನೆರವೇರಿಸುವ ಸ್ಥಳದ ಬಗ್ಗೆ ನಿರ್ಧರಿಸಿಲ್ಲ. ಇನ್ನೂ ಕೂಡ ಅಂತ್ಯಸಂಸ್ಕಾರದ ವಿಧಿವಿಧಾನ ಎಲ್ಲಿ ನಡೆಸುವುದು ತೀರ್ಮಾನವಾಗಿಲ್ಲ. ಈ ವಿಚಾರದಲ್ಲಿ  ನಟ ವಿಜಯ್ ರಾಘವೇಂದ್ರ ಅವರ ನಿರ್ಧಾರವೇ ಅಂತಿಮ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

Exit mobile version