Site icon PowerTV

ಆ.15ರ ನಂತರ ಜೆಡಿಎಸ್ ನಾಯಕರ ರಾಜ್ಯ ಪ್ರವಾಸ

ಬೆಂಗಳೂರು : ಇದೇ ಆಗಸ್ಟ್ 15ರ ನಂತರ ಪಕ್ಷ ಸಂಘಟನೆಗಾಗಿ ಜೆಡಿಎಸ್ ಪಕ್ಷದ ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

ಮುಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ, ಪಕ್ಷ ಸಂಘಟನೆ ಹಾಗೂ ನೂತನ ಕೋರ್ ಕಮಿಟಿ ರಚನೆ ಸೇರಿದಂತೆ ಹಲವು ವಿಷಯಗಳ ಚರ್ಚೆಗಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯ ಬಗ್ಗೆ ಎದೆಗುಂದದೆ ಪಕ್ಷದ ಸಂಘಟನೆ ಕಡೆ ಹೆಚ್ಚು ಗಮನ ನೀಡಬೇಕು ಎಂದು ಹೆಚ್.ಡಿ ದೇವೇಗೌಡ ಅವರು ತಾಕೀತು ಮಾಡಿದ್ದಾರೆ. ಅವರ ಆದೇಶದಂತೆ ಪಕ್ಷ ಸಂಘಟನೆಗೆ ಬಹಳಷ್ಟು  ಒತ್ತು ಕೊಟ್ಟು ಕೆಲಸ ಮಾಡಲು ನಿರ್ಧರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಜಿಟಿಡಿ ನೇತೃತ್ವದಲ್ಲಿ ಕೋರ್ ಕಮಿಟಿ

ಮಾಜಿ ಸಚಿವರಾದ ಜಿ.ಟಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನೂತನ ಕೋರ್ ಕಮಿಟಿ ರಚನೆಗೆ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ಮಾಜಿ ಶಾಸಕರಾದ ವೈ.ಎಸ್ ವಿ ದತ್ತಾ ಅವರು ಈ ಕಮಿಟಿಗೆ ಸಂಚಾಲಕರಾಗಿರುತ್ತಾರೆ. ಒಟ್ಟು 20 ಸದಸ್ಯರು ಕಮಿಟಿಯಲ್ಲಿ ಇರುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Exit mobile version