Site icon PowerTV

ಚೋರನೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಮಂಗಳಮುಖಿ ಆಯ್ಕೆ

ಬಳ್ಳಾರಿ : ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ರಾಜ್ಯದಲ್ಲಿಯೇ ಮೊದಲ ಬಾರಿ ಮಂಗಳಮುಖಿಯೊಬ್ಬರು ಆಯ್ಕೆಯಾಗಿದ್ದಾರೆ.

ಚೋರನೂರು ಗ್ರಾಮ ಪಂಚಾಯ್ತಿಗೆ ಅಧ್ಯಕ್ಷರಾಗಿ ಆಂಜಿನಮ್ಮಆಯ್ಕೆಯಾಗಿದ್ದಾರೆ. ಚೋರನೂರು ಗ್ರಾಮದ ಇವರು ಅನುಸೂಚಿತ ಜಾತಿ ಮೀಸಲಾತಿಯಡಿಯಲ್ಲಿ 2ನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಮತಿ ಗೀತಾ ಆಯ್ಕೆಯಾಗಿದ್ದಾರೆ.

ನಮ್ಮ ಗ್ರಾಮದ ಜನತೆ ನನ್ನನ್ನು ಗೆಲ್ಲಿಸಿದ್ದಾರೆ. ಅದೇ ರೀತಿಯಾಗಿ ಈಗ ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು ಅವಿರೋಧವಾಗಿ ನನ್ನನ್ನು ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡಿದ್ದಾರೆ. ಗ್ರಾಮದ ಜನತೆಗೆ ಉತ್ತಮ ಸೇವೆ ಸಲ್ಲಿಸಲು ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಶ್ರಮಿಸುವೆ ಎಂದು ನೂತನ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆ ಆಂಜಿನಮ್ಮ ತಿಳಿಸಿದ್ದಾರೆ.

Exit mobile version