ಬೆಂಗಳೂರು : ಕಾಂಗ್ರೆಸ್ ಸರ್ಕಾರದ ವಿರುದ್ದ ಟ್ವೀಟಾಸ್ತ್ರ ಪ್ರಯೋಗಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಸನ್ಮಾನ್ಯ ಹೆಚ್.ಡಿ ಕುಮಾರಸ್ವಾಮಿ ಅವರೇ.. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ ಎಂದು ಕುಟುಕಿದ್ದಾರೆ.
ಇತ್ತೀಚೆಗೆ ನೀವು ನನ್ನ ವಿರುದ್ಧ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸುತ್ತಿದ್ದೇನೆ. ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ. ಇನ್ನು ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ-ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ ಎಂದು ಸಿದ್ದರಾಮಯ್ಯ ಚಾಟಿ ಬೀಸಿದ್ದಾರೆ.
ಸನ್ಮಾನ್ಯ @hd_kumaraswamy ಅವರೇ,
ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ.
ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ.ಇನ್ನು ನೀವು… https://t.co/dXtacPzEHE
— Siddaramaiah (@siddaramaiah) August 8, 2023
ಲಜ್ಜೆಗೇಡಿ ಮುಖ್ಯಮಂತ್ರಿ
ಇನ್ನೂ ಸಿಎಂ ವಿರುದ್ಧ ವಾಗ್ದಾಳಿ ನಡೆಸಿರುವ ಹೆಚ್.ಡಿ ಕುಮಾರಸ್ವಾಮಿ ಅವರು, ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಟ್ವೀಟ್ ಮಾಡಿದ್ದರು.


