ರಾಜ್ಯಪಾಲರಿಗೆ ಬರೆದ ಪತ್ರ ನಕಲಿಯಾಗಿದೆ : ಡಾ.ಜಿ ಪರಮೇಶ್ವರ್

ಬೆಂಗಳೂರು : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆದ ಪತ್ರ ನಕಲಿಯಾಗಿದೆ. ಈ ಬಗ್ಗೆ ವರದಿ‌‌ ನೀಡಲು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‌ ಸಚಿವ ಚಲುವರಾಯಸ್ವಾಮಿ ವಿರುದ್ಧವಾಗಿ ಯಾರೋ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.‌ ಬರೆದಿರುವ ಪತ್ರ ನಕಲಿ ಇದೆ ಎಂದು ಹೇಳಿದ್ದಾರೆ.

ಮಂಡ್ಯದ ಕೃಷಿ ಅಧಿಕಾರಿಗಳು ನಾವು ಯಾರು ಪತ್ರ ಬರೆದಿಲ್ಲ ಅಂತ ಹೇಳಿದ್ದಾರೆ. ಈ‌ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಜೊತೆಗೆ ಮಾತನಾಡಿ ನಾನು ವರದಿ ತರಿಸಿಕೊಳ್ಳುತ್ತೇನೆ. ಅಧಿಕಾರಿಗಳು ನಾವು ಯಾರು ಪತ್ರ ಬರೆದಿಲ್ಲ ಎಂದು ದೂರು ನೀಡಿದ್ದಾರಂತೆ. ಈ ನಿಟ್ಟಿನಲ್ಲಿ ಸತ್ಯಾಸತ್ಯತೆಯ ಬಗ್ಗೆ ವರದಿ ಬಂದ ನಂತರ ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚೆ ಮಾಡಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ತನಿಖೆ ಮಾಡುವುದಕ್ಕೆ ಹೇಳಿದ್ದೇನೆ

ಸಚಿವ ಚಲುವರಾಯಸ್ವಾಮಿ ವಿರುದ್ದದ ಆರೋಪ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೊಲೀಸ್ ತನಿಖೆ ಮಾಡುವುದಕ್ಕೆ ಹೇಳಿದ್ದೇನೆ. ಅದೊಂದು ಫೇಕ್ ಲೆಟರ್ ಅಂತ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆ ಮಾಡುವುದಕ್ಕೆ ಹೇಳಿದ್ದೇನೆ. ಪತ್ರದಲ್ಲಿ ಇರುವುದು ಸಹಾಯಕ ನಿರ್ದೇಶಕರ ಸಹಿ ಅಲ್ಲ. ಹೀಗಾಗಿ ತನಿಖೆ ಮಾಡಿದ ಮೇಲೆ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES