Site icon PowerTV

ಸಿದ್ದರಾಮಯ್ಯ ತಮ್ಮ ಬ್ರದರ್‌ ವಿರುದ್ಧ ತನಿಖೆ ಮಾಡಿಸುತ್ತಾರಾ? : ಶಾಸಕ ಯತ್ನಾಳ್

ವಿಜಯಪುರ : ಗುತ್ತಿಗೆದಾರರು ಡಿಸಿಎಂ ಡಿ.ಕೆ ಶಿವಕುಮಾರ್‌ ಮೇಲೆ ಮಾಡಿರುವ ಕಮಿಷನ್‌ ಆರೋಪ ಬಿಜೆಪಿಗೆ ವರವಾಗಿ ಪರಿಣಮಿಸಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಕಾಂಗ್ರೆಸ್‌ ಮೇಲೆ ಬಿಜೆಪಿ ನಾಯಕರು ಹರಿಹಾಯುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಸಿದ್ದರಾಮಯ್ಯ ಈಗ ತಮ್ಮ ಬ್ರದರ್‌ ವಿರುದ್ಧ ತನಿಖೆ ಮಾಡಿಸುತ್ತಾರಾ? ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರು, ಬಿಜೆಪಿ ಸರ್ಕಾರದ ಹಗರಣಗಳನ್ನು ನ್ಯಾಯ ಮೂರ್ತಿಯವರ ನೇತೃತ್ವದ ಆಯೋಗದ ಮೂಲಕ ತನಿಖೆ ಮಾಡಿಸುತ್ತೇವೆ ಎಂದಿದ್ದರು. ಈಗ ಗುತ್ತಿಗೆದಾರರು ಆರೋಪ ಮಾಡಿರುವ ಅವರ ‘ಬ್ರದರ್’ ವಿರುದ್ಧ ತನಿಖೆ ಮಾಡಿಸುತ್ತಾರಾ? ಎಂದು ಗುಡುಗಿದ್ದಾರೆ.

‘ಬ್ರದರ್’ ನಿಮ್ಮನ್ನೂ ಮೀರಿಸಿದ್ದಾರಾ?

ಗುತ್ತಿಗೆದಾರರು ನೊಣವಿನಕೆರೆ ಅಜ್ಜಯ್ಯನವರ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲೆಸೆದಿದ್ದಾರೆ. ಇದನ್ನು ನೋಡಿದರೆ ‘ಬ್ರದರ್’ ಡಿಮ್ಯಾಂಡ್ ಗುತ್ತಿಗೆದಾರರಿಗೆ ಬಹಳ ಸಂಕಷ್ಟಕ್ಕೆ ದೂಡಿದೆ ಎಂದು ಕುಟುಕಿದ್ದಾರೆ.

ಲೋಕಸಭಾ ಚುನಾವಣೆಗೆ ಎಷ್ಟು ಫಿಕ್ಸ್ ಮಾಡಿದ್ದೀರಿ ಸಿದ್ದರಾಮಯ್ಯನವರೇ? ಅಥವಾ ನಿಮ್ಮ ಗಮನಕ್ಕೆ ಬಾರದೆ ನಿಮ್ಮ ‘ಬ್ರದರ್’ ನಿಮ್ಮನ್ನೂ ಮೀರಿಸಿದ್ದಾರಾ? ಕ್ರಮಕೈಗೊಳ್ಳುವಿರಾ? ಅಥವಾ ಅವರು ಗುತ್ತಿಗೆದಾರರೇ ಅಲ್ಲ ಅಂತ ಸರ್ಟಿಫಿಕೇಟ್ ನೀಡುತ್ತೀರಾ? ಎಂದು ಚಾಟಿ ಬೀಸಿದ್ದಾರೆ.

Exit mobile version