Site icon PowerTV

ಮುಟ್ಟುವುದು ಅಥವಾ ತಬ್ಬಿಕೊಳ್ಳುವುದು ಅಪರಾಧವಲ್ಲ

ಬೆಂಗಳೂರು : ಲೈಂಗಿಕ ಉದ್ದೇಶವಿಲ್ಲದೇ ಮಹಿಳೆಯನ್ನು ಮುಟ್ಟುವುದು ಅಥವಾ ತಬ್ಬಿಕೊಳ್ಳುವುದು ಅಪರಾಧವಲ್ಲ ಎಂದು ಬ್ರಿಜ್​​​​ ಭೂಷಣ್​​ ದೆಹಲಿ ಕೋರ್ಟ್ ಮುಂದೆ ಹೇಳಿದ್ದಾರೆ.

ಬ್ರಿಜ್​ ಭೂಷಣ್​​​ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಭಾರತ ಕುಸ್ತಿ ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್ ಸಿಂಗ್ ಕೋರ್ಟ್​ ಮುಂದೆ ಈ ಹೇಳಿಕೆ ನೀಡಿದ್ದಾರೆ.

ಭಾರತದ ಹೊರಗೆ ಅಪರಾಧಗಳು ನಡೆದಿವೆ ಎಂದು ಆರೋಪಿಸಲಾಗಿರುವುದರಿಂದ ನ್ಯಾಯಾಲಯಕ್ಕೆ ಈ ಪ್ರಕರಣದ ವಿಚಾರಣೆ ನಡೆಸಲು ಯಾವುದೇ ಅಧಿಕಾರವಿಲ್ಲ ಎಂದು ಬ್ರಿಜ್ ಭೂಷಣ್ ಪರ ವಕೀಲ ರಾಜೀವ್‌ ಮೋಹನ್‌ ಹೇಳಿದರು.

ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜಿತ್ ಸಿಂಗ್ ಜಸ್ಪಾಲ್ ಅವರು ತಮ್ಮ ವಿರುದ್ಧ ಆರೋಪಗಳನ್ನು ಹೊರಿಸುವ ಮುನ್ನವೇ ಅದನ್ನು ವಿರೋಧಿಸಿ ತಮ್ಮ ವಕೀಲರ ಮೂಲಕ ಬ್ರಿಜ್ ಭೂಷಣ್ ಅವರು ವಾದ ಮಂಡಿಸಿದ್ದಾರೆ.

Exit mobile version