Site icon PowerTV

ಮಗಳನ್ನು ಶಾಲೆಗೆ ಬಿಡಲು ಹೋದ ತಂದೆ ಅಪಘಾತದಲ್ಲಿ ಸಾವು:ಮಗಳಿಗೆ ಗಂಭೀರ ಗಾಯ !

ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು ಮಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಎಪಿಎಂಸಿ ಮಾರುಕಟ್ಟೆ ಮುಂಭಾಗ ನಡೆದಿದೆ.

ತಾಲೂಕಿನ ಮುದ್ದನಾಯಕನಪಾಳ್ಯದ ವೆಂಕಟೇಶ್ (45) ಮೃತ ತಂದೆ. ಶಾಲಾ‌‌ ಬಾಲಕಿ ಯಶಸ್ವಿನಿ (15) ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ವತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಮಲ್ಪೆ ಬಂದರಿನ ನೀರಿಗೆ ಬಿದ್ದ 1.5 ಲಕ್ಷದ ಐಫೋನ್ ಹುಡುಕಿಕೊಟ್ಟ ಮುಳುಗುತಜ್ಞ

ಮೃತ ವೆಂಕಟೇಶ್​ ಎಂದಿನಂತೆ ತನ್ನ ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ನಗರದ ಎಪಿಎಂಸಿ ಮರುಕಟ್ಟೆ ಮುಂಭಾಗ ಲಾರಿಯೊಂದು ಹಿಂದಿನಿಂದ ಬಂದು ಬೈಕ್​ ಗೆ ಡಿಕ್ಕಿ ಹೊಡೆದ ಪರಿಣಾಮ ವೆಂಕಟೇಶ್​ ಸ್ಥಳದಲ್ಲೇ ಸಾವಿಗೀಡಾಗಿದ್ದು ಮಗಳಿಗೆ ಗಂಭೀರ ಗಾಯಗಳಾದ ಪರಿಣಾಮ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ.

ಅಪಘಾತದ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Exit mobile version