Site icon PowerTV

ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಭ್ರಷ್ಟರ ವಿರುದ್ದ ಬಿದ್ದಿರುವವರು : ಸಿಎಂ

ಬೆಂಗಳೂರು: ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಬಾಕಿ ಹಣ ಬಿಡುಗಡೆ: ಸರ್ಕಾರಕ್ಕೆ ಆಗಸ್ಟ್​ 31 ಡೆಡ್​ಲೈನ್ – ಕೆಂಪಣ್ಣ!

ನಗರದಲ್ಲಿ ಮಾತನಾಡಿದ ಅವರು, ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ  ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದು ಅವರು ಹೇಳಿದರು.

Exit mobile version