Site icon PowerTV

ಬಿಬಿಎಂಪಿ ಮುಂಜಾಗ್ರತಾ ಕ್ರಮ ವಹಿಸಬೇಕಿತ್ತು : ಮಾಜಿ ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು : ನಿನ್ನೆ ಬಿಬಿಎಂಪಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ, ಒಂಭತ್ತು ಜನರಿಗೆ ಸುಟ್ಟ ಗಾಯಗಳಾಗಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 24 ರಿಂದ 48 ಗಂಟೆ ಎಲ್ಲರೂ ಅಬ್ಸರ್‌ವೇಷನ್‌ನಲ್ಲಿ ಇದ್ದಾರೆ. ಎಲ್ಲರೂ ಆರೋಗ್ಯವಾಗಿದ್ದಾರೆ. ವೈದ್ಯರು ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಿಎಂಪಿಯಲ್ಲಿ ಈ ಒಂದು ಘಟನೆ ನಡೆಯಬಾರದಿತ್ತು. ಎಲ್ಲರಿಗೂ ಮಾದರಿಯಾಗಿರುವಂತೆ ಬಿಬಿಎಂಪಿಯು ಮುಂಜಾಗ್ರತಾ ಕ್ರಮ ವಹಿಸಬೇಕಿತ್ತು. ಯಾವುದೇ ಕಚೇರಿಯಾಗಲಿ ಮುಂಜಾಗ್ರತಾ ಕ್ರಮ ವಹಿಸಬೇಕು. ಇದರಿಂದ ಎಲ್ಲಾ ಇಂಜಿನಿಯರಿಂಗ್ ಹಾಗೂ ಸಿಬ್ಬಂದಿಗೆ ಗಾಯಗಳಾಗಿವೆ. ಇದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ವಹಿಸಬೇಕು. ನಾನು ಎಲ್ಲಾ 9 ಜನ ಸಿಬ್ಬಂದಿ ಹಾಗೂ ವೈದ್ಯರ ಬಳಿ ಮಾತನಾಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

Exit mobile version