Site icon PowerTV

ನನಗೆ ಬರ್ತ್ ಡೇ ಡೇಟ್ ಗೊತ್ತಿಲ್ಲ : ಸಿದ್ದರಾಮಯ್ಯ

ಮೈಸೂರು : ನೋಡಪ್ಪಾ.. ನನ್ನ ಬರ್ತ್​ ಡೇ ಡೇಟ್​ ಗೊತ್ತಿಲ್ಲ.. ಬಿಕಾಸ್, ನನಗೆ ಬರ್ತ್​ ಡೇ ಬಗ್ಗೆ ಯಾವುದೇ ಇಂಟ್ರೆಸ್ಟ್​ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ ಹೇಳಿದ್ದಾರೆ.

ತಮ್ಮ ಹುಟ್ಟುಹಬ್ಬ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಆಗಸ್ಟ್ 3 ಹಾಗೂ ಆಗಸ್ಟ್ 12 ಎರಡೂ ಕೂಡ ತಪ್ಪು ದಿನಾಂಕಗಳು ಎಂದು ತಿಳಿಸಿದ್ದಾರೆ.

ಒಂದು ನನ್ನ ಮೇಷ್ಟ್ರು ಬರೆಸಿರುವುದು. ಇನ್ನೊಂದು ನಮ್ಮ ಅಪ್ಪ ಯಾವುದೋ ಒಂದು ಡೇಟ್ ಬರೆಸಿರೋದು. ಹೀಗಾಗಿ, ಎರಡು ದಿನಾಂಕವೂ ತಪ್ಪು. ಜನ್ಮ ದಿನಾಂಕ ಸರಿಯಾಗಿ ಗೊತ್ತಿಲ್ಲ. ಹೀಗಾಗಿ, ನನಗೆ ಹುಟ್ಟಹಬ್ಬದ ಬಗ್ಗೆ ಯಾವ ಆಸಕ್ತಿ ಇಲ್ಲ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಕೆಲವು ರಾಜಕೀಯ ನಾಯಕರು ಹಾಗೂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಇಂದು ಸಹ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಹೀಗಾಗಿ, ಸುದ್ದಿಗಾರರ ಪ್ರಶ್ನೆಗೆ ಸಿಎಂ ಸ್ಪಷ್ಟನೆ ಕೊಟ್ಟಿದ್ದಾರೆ.

Exit mobile version