Site icon PowerTV

ತಿರಂಗಾ ಅಭಿಯಾನ : ಮನೆ ಮೇಲೆ ಬಾವುಟ ಕಟ್ಟಿ ಸೆಲ್ಫಿ ಫೋಟೋ ಅಪ್ಲೋಡ್ ಮಾಡಿ

ಬೆಂಗಳೂರು : 76ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಹರ್ ಘರ್ ತಿರಂಗಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ.

ಇಂದಿನಿಂದ 3 ದಿನ ಅಂದರೆ ಆಗಸ್ಟ್ 13ರಿಂದ ಆಗಸ್ಟ್ 15ರವರೆಗೆ ದಿನ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದ್ದು, ಪ್ರತಿ ಮನೆ ಮೇಲೆ ಬಾವುಟ ಕಟ್ಟಿ ವೆಬ್‌ಸೈಟ್‌ನಲ್ಲಿ ಸೆಲ್ಫಿ ಫೋಟೋ ಅಪ್‌ಲೋಡ್‌ ಮಾಡಿ ಎಂದು ಮನವಿ ಮಾಡಿದ್ದಾರೆ.

ನಮ್ಮ ದೇಶದ ಹೆಮ್ಮೆಯ ಸಂಕೇತವಾದ ರಾಷ್ಟ್ರಧ್ವಜವನ್ನು ಹಾರಿಸಿ https://harghartiranga.com ನಲ್ಲಿ ತ್ರಿವರ್ಣ ಧ್ವಜದೊಂದಿಗೆ ನಿಮ್ಮ ಸೆಲ್ಫಿಯನ್ನು ಅಪ್‌ಲೋಡ್ ಮಾಡಿ ಎಂದು ಮನವಿ ಮಾಡಿದ್ದಾರೆ. ಆಗಸ್ಟ್ 13 ರಿಂದ 15 ರ ಮಧ್ಯೆ ನಡೆಯುವ #ಹರ್ ಘರ್ ತಿರಂಗಾ ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ನಾನು ನಿಮ್ಮೆಲ್ಲರನ್ನು ಕೋರುತ್ತೇನೆ ಎಂದಿದ್ದಾರೆ.

ಸ್ವಾತಂತ್ರ್ಯೋತ್ಸವಕ್ಕೆ ಸಕಲ ಸಿದ್ಧತೆ

76ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನ ಮಾಣಿಕ್‌ ಶಾ ಪರೇಡ್‌ ಮೈದಾನದಲ್ಲಿ ಭಾರೀ ಭದ್ರತೆ ಮಾಡಲಾಗಿದೆ. KSRP, CAR, ಹೋಮ್‌ ಗಾರ್ಡ್, ಸಂಚಾರಿ ಪೊಲೀಸರು ಸೇರಿ 38 ತುಕಡಿ ನಿಯೋಜನೆ ಮಾಡಲಾಗಿದೆ. ಭದ್ರತೆಗೆ 1,350 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮೈದಾನದ ಸುತ್ತಲೂ 100 ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.

Exit mobile version