Site icon PowerTV

ಆ.19ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್​ 19ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರಿನ ಹಲವೆಡೆ ಇಂದು(ಭಾನುವಾರ) ರಾತ್ರಿ 9 ಗಂಟೆ ಸುಮಾರಿನಲ್ಲಿ ಮಳೆಯಾಗಿದೆ. ಕೆಲವೆಡೆ ಸಾಧಾರಣ ಹಾಗೂ ಹಲವೆಡೆ ತುಂತುರು ಮಳೆಯಾಗಿದೆ. ವೀಕೆಂಡ್ ಖುಷಿಯಲ್ಲಿದ್ದ ಬೆಂಗಳೂರಿಗರು ವರುಣನ ಆಗಮನದಿಂದ ಪರದಾಡುವಂತಾಯಿತು.

Exit mobile version