Site icon PowerTV

ಭ್ರಷ್ಟಾಚಾರದ ಮತ್ತೊಂದು ಮುಖವೇ ಕಾಂಗ್ರೆಸ್ : ಸಿ.ಟಿ. ರವಿ

ಚಿಕ್ಕಮಗಳೂರು : ಕಾಂಗ್ರೆಸ್ಸಿನ ಬಹುತೇಕ ಶಾಸಕರು ಒಂದೇ ದಿನ ವಸೂಲಿಗೆ ಹೊರಟಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅಷ್ಟು ಖರ್ಚು ಮಾಡಿದ್ದೇವೆ ಅಂತ ಬಹಿರಂಗವಾಗಿ ಹೇಳ್ತಿದ್ದಾರೆ. ಕರಪ್ಷನ್-ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು ಎಂದು ಕುಟುಕಿದ್ದಾರೆ.

ದೇಶ-ರಾಜ್ಯದ ಹಗರಣಗಳನ್ನು ಪಟ್ಟಿ ಮಾಡಿದರೆ ಶೇ.90 ಕಾಂಗ್ರೆಸ್ ಅವಧಿಯಲ್ಲಿದೆ. 90% ಅಪರಾಧಿ ಸ್ಥಾನದಲ್ಲಿ ಇರೋರು ಕಾಂಗ್ರೆಸ್ ಸಚಿವರು. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಬೀಜ ಬಿತ್ತಿದೆ. ಭ್ರಷ್ಟಾಚಾರದಿಂದ ಕಾಂಗ್ರೆಸ್ ವಿಮುಕ್ತವಾಗಿದೆ ಅನ್ನೋದನ್ನು ಯಾರು ನಂಬಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರದ ಮತ್ತೊಂದು ಮುಖವೇ ಕಾಂಗ್ರೆಸ್. ಅವರು ಯಾವುದೇ ಪ್ರಾಮಾಣಿಕತೆಯ ಸೋಗು ಹಾಕಿದರೂ ಭ್ರಷ್ಟಾಚಾರದ ವಾಸನೆ ಇರುತ್ತೆ ಎಂದು ಕಾಂಗ್ರೆಸ್​​ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿಕಾರಿದ್ದಾರೆ.

Exit mobile version