Tuesday, August 26, 2025
Google search engine
HomeUncategorizedನನಗೆ ಹುಚ್ಚೇ? ಅಂದು ನೀವು ಹುಟ್ಟೇ ಇರಲಿಲ್ಲ..! : ಉಪೇಂದ್ರ ಕಿಡಿ

ನನಗೆ ಹುಚ್ಚೇ? ಅಂದು ನೀವು ಹುಟ್ಟೇ ಇರಲಿಲ್ಲ..! : ಉಪೇಂದ್ರ ಕಿಡಿ

ಬೆಂಗಳೂರು : ಆಕ್ಷೇಪಾರ್ಹ ಪದ ಬಳಕೆ ಸಂಬಂಧ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸ್​ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿರುವ ಬಗ್ಗೆ ನಟ ಉಪೇಂದ್ರ ಮೌನಮುರಿದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ ಎಂದು ಚಾಟಿ ಬೀಸಿದ್ದಾರೆ.

50 ವರ್ಷಗಳ ಹಿಂದೆ  ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಯಾಕೆ ಇಷ್ಟೊಂದು ದ್ವೇಷ?

ನನಗೆ ಹುಚ್ಚೇ? ಅದಕ್ಕೆ ಕಾರಣವಾದರೂ ಏನು? ಅದರಿಂದ ನನಗೆ ಸಿಗುವ ಲಾಭವಾದರೂ ಏನು? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ದ್ವೇಷ? ಎಂದು ಉಪೇಂದ್ರ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments