Site icon PowerTV

Good News! : ಆ.15ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಫ್ರೀ ಚಿಕಿತ್ಸೆ

ಬೆಂಗಳೂರು : ಆಗಸ್ಟ್ 15ರಿಂದ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.

ಆಸ್ಪತ್ರೆಗಳು ರೋಗಿಗಳಿಂದ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸುವುದಿಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಉಚಿತವಾಗಿದ್ದು, ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ತಾನಾಜಿ ಸಾವಂತ್ ತಿಳಿಸಿದ್ದರು.

ಆರೋಗ್ಯದ ಹಕ್ಕು ಅಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಗ್ರಾಮೀಣ ಆಸ್ಪತ್ರೆಗಳು, ಮಹಿಳಾ ಆಸ್ಪತ್ರೆಗಳು, ಜಿಲ್ಲಾ ಜನರಲ್ ಆಸ್ಪತ್ರೆಗಳು, ಉಪ ಜಿಲ್ಲಾ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಯು ಉಚಿತವಾಗಿರುತ್ತದೆ ಎಂದು ಸಚಿವ ತಾನಾಜಿ ಸಾವಂತ್ ಹೇಳಿದ್ದಾರೆ.

ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಒಟ್ಟು 2,418 ಆಸ್ಪತ್ರೆಗಳು ಮತ್ತು ವೈದ್ಯಕೀಯ ಕೇಂದ್ರಗಳಲ್ಲಿ ಈ ಉಚಿತ ಸೌಲಭ್ಯಗಳು ಲಭ್ಯವಾಗಲಿವೆ. ಈ ಯೋಜನೆಯು 2.5 ಕೋಟಿಗೂ ಹೆಚ್ಚು ಜನರಿಗೆ ಫ್ರೀ ಚಿಕಿತ್ಸೆಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ.

ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ

ಆಯುಷ್ಮಾನ್, ಮಹಾತ್ಮಾ ಫುಲೆ ಜನ್ ಆರೋಗ್ಯ ಯೋಜನೆ ಜೊತೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮಹಾರಾಷ್ಟ್ರ ಬಿಜೆಪಿ ಹೇಳಿದೆ.

Exit mobile version