Site icon PowerTV

ಕಾಂಗ್ರೆಸ್​ನಿಂದಲೇ ಟಿಕೆಟ್ ಕೇಳುವೆ : ಹೆಚ್. ವಿಶ್ವನಾಥ್

ಮೈಸೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ ಪಕ್ಷದಿಂದಲೇ ಟಿಕೆಟ್ ಕೇಳುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ.

ಮೈಸೂರಿನಿಂದ ಲೋಕಸಭೆಗೆ ಸ್ಪರ್ಧಿಸುವಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕಾಂಗ್ರೆಸ್‌ನಿಂದ ಸಂಸದನಾಗಿದ್ದೇನೆ. 40 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ ಎಂದಿದ್ದಾರೆ.

ರಾಜಕೀಯ ಜೀವನದ ಅತಿ ಹೆಚ್ಚು ಕಾಲ ಕಾಂಗ್ರೆಸ್‌ನಲ್ಲಿದ್ದೆ. ಜೆಡಿಎಸ್‌ ಪಕ್ಷದ ಅಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ನನ್ನ ಬಾವುಟ ಬದಲಾಗುತ್ತದೆ. ಆದರೆ, ಅಜೆಂಡಾ ಬದಲಾಗುವುದಿಲ್ಲ. ಯಾವುದೋ ಗಳಿಗೆಯಲ್ಲಿ ಕಾಂಗ್ರೆಸ್ ಬಿಟ್ಟಿದ್ದೆ. ಈಗ ಮತ್ತೊಮ್ಮೆ ಏಕೆ ಕಾಂಗ್ರೆಸ್‌ನಿಂದ ಸ್ಪರ್ಧಿಸಬಾರದು ಎಂದು ಪ್ರಶ್ನಿಸಿದ್ದಾರೆ.

ಏನೇನು ಬದಲಾಗುತ್ತದೆಯೋ ನೋಡೋಣ

ರಾಷ್ಟ್ರದಲ್ಲಿ ಹಾಗೂ ರಾಜ್ಯದಲ್ಲಿ ಈಗ ಪಕ್ಷ ರಾಜಕಾರಣಕ್ಕಿಂತ ವ್ಯಕ್ತಿ ರಾಜಕಾರಣ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ, ಹೆಚ್‌.ಡಿ ದೇವೇಗೌಡ ಕೇಂದ್ರಿತ ರಾಜಕಾರಣ ನಡೆಯುತ್ತಿದೆ. ಇದರಿಂದ ರಾಜಕೀಯ ಪಕ್ಷಗಳಲ್ಲಿ ಆಂತರಿಕ ಪ್ರಜಾಪ್ರಭುತ್ವ ಸತ್ತುಹೋಗಿದೆ. ರಾಜಕಾರಣ ಜಡವಲ್ಲ ಅದು ಜಂಗಮ. ಏನೇನು ಬದಲಾಗುತ್ತದೆಯೋ ನೋಡೋಣ ಎಂದು ಹೇಳಿದ್ದಾರೆ.

Exit mobile version