Site icon PowerTV

ಚಲುವರಾಯಸ್ವಾಮಿಗೆ ನನ್ನದೇ ಭಯ! : ಹೆಚ್​.ಡಿ.ಕೆ

ಬೆಂಗಳೂರು : ತಮ್ಮ ವಿರುದ್ಧ ಬರೆದಿರುವ ಪತ್ರ ನಕಲಿ ಎನ್ನುವುದಾದರೆ ಕೃಷಿ ಸಚಿವರು ರಾಜ್ಯಪಾಲರ ಬಳಿಗೆ ಏಕೆ ಹೋದರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಇದನ್ನೂ ಓದಿ: ಅವರ ಪಾಪದ ದುಡ್ಡಿನಲ್ಲಿ ವಿದೇಶಕ್ಕೆ ಹೋಗಲಾ? ಸಚಿವರಿಗೆ ಹೆಚ್.ಡಿ.ಕೆ ತಿರುಗೇಟು

ಕಾಂಬೋಡಿಯಾದಿಂದ ಭಾನುವಾರ ತಡರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು,  ನಾನು ಆ ಪ್ರಕರಣದ ಬಗ್ಗೆ ಚರ್ಚೆಯನ್ನೆ ಮಾಡಿಲ್ಲ. ಎಲ್ಲೂ ಆ ಬಗ್ಗೆ ಮಾತನಾಡಿಲ್ಲ. ನನ್ನ ಹೆಸರು ಯಾಕೆ  ತಳುಕು ಹಾಕುತ್ತಿದ್ದಾರೆ ಅಲ್ಲಿ? ಅವರಿಗೆ ಅಲ್ಲೂ ನನ್ನ ಹೆಸರೇ ಬೇಕು, ಯಾಕೆಂದರೆ ನನ್ನದೇ ಭಯ ಇರೋದು ಅವರಿಗೆ ಎಂದು ಚಲುವರಾಯ ಸ್ವಾಮಿಗೆ ಕುಟುಕಿದರು.

ಮೊದಲು ಪ್ರಾಮಾಣಿಕವಾಗಿ ನಡೆದುಕೊಳ್ಳುವುದನ್ನು ಕಲಿಯಬೇಕು. ಪ್ರಾಮಾಣಿಕವಾಗಿ ನಡೆದುಕೊಂಡರೆ ಇಂತಹ ಪರಿಸ್ಥಿತಿ ಏನಕ್ಕೆ ಬರುತ್ತದೆ? ಮಂತ್ರಿಗಿರಿ ಸಿಕ್ಕಿದೆ ಅಂತಾ ಹಗಲು ದರೋಡೆ ಮಾಡೋದಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಅವರು ಹೇಳಿದರು.

ಈ ವೇಳೆ ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕ ಮಂಜುನಾಥ್ ಇದ್ದರು.

Exit mobile version