Site icon PowerTV

ಹೃದಯಾಘಾತದಿಂದ ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿನಿ

ಮಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಒರ್ವ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.

ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಸುಮ (19) ಮೃತ ವಿದ್ಯಾರ್ಥಿನಿ. ಕೆಲ ದಿನಗಳಿಂದ ಅನಾರೋಗ್ಯ ಕಾರಣದಿಂದ ಆಗಸ್ಟ್ 9 ರಂದು ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ಸುಮ. ಬಳಿಕ ಆರೋಗ್ಯ ಸರಿ ಹೋಗದ ಹಿನ್ನೆಲೆ ಆಗಸ್ಟ್ 11 ರಂದು ಅಸ್ವಸ್ಥಗೊಂಡು ಬಿದ್ದಿದ್ದು, ಸುಮಳನ್ನು ಪೋಷಕರು ತಕ್ಷಣ ಆಸ್ಪತ್ರೆಗೆ ರವಾನಿಸಿದ್ದರು.

ಇದನ್ನು ಓದಿ : ಬಂಧನದ ಭೀತಿಯಲ್ಲಿ ನಾಪತ್ತೆಯಾದ ನಟ ಉಪೇಂದ್ರ!

ಮಗಳ ಆರೋಗ್ಯ ಅದಗೆಟ್ಟಿರುವುದನ್ನು ಕಂಡು ಕಂಗಲಾಗಿದ್ದ ಪೋಷಕರು.

ನಿನ್ನೆ ಸಂಜೆ ವೇಳೆ ಮತ್ತೆ ಅಸ್ವಸ್ಥಗೊಂಡಿದ್ದ ಯುವತಿ. ತಕ್ಷಣ ಪೋಷಕರು ಆಸ್ಪತ್ರೆಗೆ ರವಾನಿಸುವ ವೇಳೆ ದಾರಿ ಮಧ್ಯೆ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿನಿ. ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿದೆ ಎಂದು ಮಾಹಿತಿ ನೀಡಿದ ವೈದ್ಯರು. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Exit mobile version