Site icon PowerTV

ತುಮಕೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು : ಡಾ.ಜಿ ಪರಮೇಶ್ವರ್

ತುಮಕೂರು : ನೂತನವಾಗಿ ನಿರ್ಮಾಣ ಮಾಡಿರುವ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯೋತ್ಸವ ಸಮಾರಂಭ ಅದ್ದೂರಿಯಾಗಿ ನೆರವೇರಿತು.‌ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರು ಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವ ಉಳಿಸಿಕೊಳ್ಳಬೇಕು, ಸಂವಿಧಾನಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು. ಇನ್ನು, ಸ್ಥಳೀಯರಿಗೆ HALನಲ್ಲಿ ಆದ್ಯತೆ‌ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಭರವಸೆ ನೀಡಿದರು.

ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಪ್ರತ್ಯೇಕವಾಗಿ ವಿಶ್ಲೇಷಣೆ ಮಾಡಲಾಗುತ್ತಿದೆ. ಅಕ್ರಮ ಕಂಡು ಬಂದಲ್ಲಿ ಕ್ರಮ ಕೈಗೊಳ್ಳುತ್ತೇವೆ. ತುಮಕೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ನೀಡುವಂತೆ ಒತ್ತಾಯ ಮಾಡಿದ್ದೇವೆ. ನಮ್ಮ ಜಿಲ್ಲೆಯ ಶಾಸಕರು ಸಿಎಂಗೆ ಒತ್ತಡ ಹೇರಿದ್ದೇವೆ ಎಂದು ಮಾಹಿತಿ ನೀಡಿದರು.

ಬೋಟ್ ರೈಡಿಂಗ್​ಗೆ ಚಾಲನೆ

ಅಮಾನಿಕೆರೆ ಬೋಟ್ ರೈಡಿಂಗ್ ವ್ಯವಸ್ಥೆಯನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅಧಿಕೃತವಾಗಿ ಉದ್ಘಾಟಿಸಿದರು. ಜಿಲ್ಲಾಧಿಕಾರಿ‌ ಕೆ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಿ.ಪ್ರಭು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶಗೌಡ, ಮೇಯರ್ ಪ್ರಭಾವತಿ ಸುರೇಶ್ವರ್ ಸಚಿವರೊಂದಿಗೆ ಬೋಟ್ ರೈಡಿಂಗ್ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಸೇರಿದಂತೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಸೇರಿದ ಸಾರ್ವಜನಿಕರು, ಮಕ್ಕಳು, ಅಧಿಕಾರಿಗಳು, ನೌಕರರು ಮತ್ತಿತರರು ಉಪಸ್ಥಿತರಿದ್ದರು.

Exit mobile version