Site icon PowerTV

ರಾಯಣ್ಣರ ಹೋರಾಟ ನೆನೆದ ‘ಡಿ’ ಬಾಸ್

ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾ ಮೂಲಕ ಸ್ಯಾಂಡಲ್​ವುಡ್ ಸಿನಿ ಪ್ರೇಕ್ಷಕರ ಮನ ಗೆದ್ದಿದ್ದ ‘ಡಿ’ ಬಾಸ್​ ಮತ್ತೆ ಅಭಿಮಾನಿಗಳ ದಿಲ್ ಕದ್ದಿದ್ದಾರೆ.

ರಾಯಣ್ಣರ ಜನ್ಮದಿನ ಪ್ರಯುಕ್ತ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ಅವರು ರಾಯಣ್ಣನ ನಿಸ್ವಾರ್ಥ ಹೋರಾಟವನ್ನು ಸ್ಮರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಅವರು, ಇಂದು ನಮ್ಮ ನಾಡಿನ ಅಪ್ರತಿಮ ಹೋರಾಟಗಾರರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಜನ್ಮಜಯಂತಿ. ರಾಯಣ್ಣನ ನಿಸ್ವಾರ್ಥ ಹೋರಾಟ, ದೇಶಪ್ರೇಮ ಸದಾ ಸ್ಫೂರ್ತಿದಾಯಕವಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.

ನಮ್ಮ ದೇಶ ನಮ್ಮ ಹೆಮ್ಮೆ

ಇನ್ನೂ, ಸಮಸ್ತ ನಾಡಿನ ಜನತೆಗೆ ೭೭ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ದೇಶಕ್ಕಾಗಿ ಮಡಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ಸ್ವಾತಂತ್ರ್ಯದ ಮನೋಭಾವವು ಸದಾ ನಮ್ಮ ಹೃದಯದಲ್ಲಿರಲಿ. ನಮ್ಮ ದೇಶ ನಮ್ಮ ಹೆಮ್ಮೆ ಎಂದು ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ್ದಾರೆ.

ಕಿಚ್ಚ ಸುದೀಪ್ ಟ್ವೀಟ್

ನಟ ಕಿಚ್ಚ ಸುದೀಪ್ ಅವರು ಸಹ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಜಗತ್ತಿನಾದ್ಯಂತ ಇರುವ ಪ್ರತಿಯೊಬ್ಬ ಭಾರತೀಯರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳು. 77ನೇ ಸ್ವಾತಂತ್ರ್ಯ ಮಹೋತ್ಸವ ಮಹೋನ್ನತವಾಗಲಿ ಎಂದು ಬರೆದುಕೊಂಡಿದ್ದಾರೆ.

Exit mobile version