Site icon PowerTV

I.N.D.I.A.ಗೆ ಸ್ಟಾರ್ಟಿಂಗ್ ಟ್ರಬಲ್ : 7 ಕ್ಷೇತ್ರಗಳಲ್ಲಿ ‘ಕೈ’ ಏಕಾಂಗಿ ಸ್ಪರ್ಧೆ?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಸಮರ ಸಾರಿರುವ I.N.D.I.A. ಒಕ್ಕೂಟಕ್ಕೆ ಆರಂಭಿಕ ಹಿನ್ನಡೆಯಾಗಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯ 7 ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆಗೆ ನಿರ್ಧರಿಸಿದೆ. ಇದು ವಿಪಕ್ಷಗಳ ಒಕ್ಕೂಟದಲ್ಲಿ ಭಾರೀ ಗೊಂದಲ ಸೃಷ್ಟಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಅಗತ್ಯ ತಯಾರಿ ನಡೆಸುವಂತೆ ನಮಗೆ ಸೂಚಿಸಲಾಗಿದೆ.

7 ಸ್ಥಾನಗಳನ್ನು ಗೆಲ್ಲಲು ಸಿದ್ಧತೆ

ನಾವು ಎಲ್ಲಾ 7 ಸ್ಥಾನಗಳಲ್ಲಿ ಸಿದ್ಧತೆಗಳನ್ನು ಪ್ರಾರಂಭಿಸಲು ನಿರ್ಧರಿಸಿದ್ದೇವೆ. ಚುನಾವಣೆಗೆ ಇನ್ನು ಏಳು ತಿಂಗಳು ಉಳಿದಿವೆ ಮತ್ತು ಎಲ್ಲಾ ಏಳು ಸ್ಥಾನಗಳನ್ನು ಗೆಲ್ಲಲು ಸಿದ್ಧತೆ ನಡೆಸಲು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಸೂಚಿಸಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಹೇಳಿದ್ದಾರೆ.

ನಾವು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸುತ್ತೇವೆ ಎಂಬುದನ್ನು ನಂತರ ನಿರ್ಧರಿಸಲಾಗುವುದು.. ಆದರೆ, ದೆಹಲಿಯ ಎಲ್ಲಾ 7 ಸ್ಥಾನಗಳಲ್ಲಿ ನಮ್ಮ ಎಲ್ಲಾ ಶಕ್ತಿಯೊಂದಿಗೆ ತಯಾರಿ ನಡೆಸಲು ನಮಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Exit mobile version