Site icon PowerTV

ಸಿದ್ದರಾಮಯ್ಯ ಬಂದ ಕೂಡಲೇ ಬರಗಾಲ ವಕ್ಕರಿಸಿದೆ

ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ಟ್ವೀಟ್​​​ ಮಾಡಿ ವ್ಯಂಗ್ಯವಾಡಿದೆ.

ರಾಜ್ಯದಲ್ಲಿ ಬರದ ಬೇಗೆಗೆ ಐವತ್ತಕ್ಕೂ ಹೆಚ್ಚು ತಾಲ್ಲೂಕುಗಳು ತತ್ತರಿಸಿವೆ. ಆದರೆ, ಸಿದ್ದರಾಮಯ್ಯ ಆಡಳಿತ ಉತ್ತರ ಹುಡುಕುತ್ತಿಲ್ಲ. ಮಳೆ ಇಲ್ಲದೆ ಜಲಾಶಯಗಳ ತುಂಬುತ್ತಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ಮಡಿಲುಮಾತ್ರ ತುಂಬಿ ತುಳುಕುತ್ತಿದೆ. ಬರಗಾಲ ಬಂದರೂ ತಾನು ಮಾತ್ರ ಬೆಣ್ಣೆ ತಿನ್ನುತ್ತಿರುವ ಈ ಸರ್ಕಾರದ ಹಸಿವು ನೀಗುವವರೆಗೂ ರೈತನ ಉಸಿರಿಗಿಲ್ಲ ಗ್ಯಾರಂಟಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಬಿಜೆಪಿ, ರಾಜ್ಯದಲ್ಲಿ 60ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರಕ್ಕೆ ತಡೆಯುವ ಚಿಂತೆ ಇಲ್ಲ. ಬಿತ್ತನೆ ಬೀಜ ದರ ನಿಗ್ರಹಕ್ಕೂ ಸರ್ಕಾರ ಒಪ್ಪುತ್ತಿಲ್ಲ, ಕೃಷಿ ಇಲಾಖೆಯ ಕರ್ಮಕಾಂಡಕ್ಕೆ ಕೊನೆಯಿಲ್ಲ. ರೈತರು ಬಿತ್ತಿದ ಬೀಜ ಮೊಳಕೆ ಒಡೆಯುತ್ತಿಲ್ಲ. ಆದರೂ ಸರ್ಕಾರದ ಕಲೆಕ್ಷನ್ ನಿಲ್ಲುತ್ತಿಲ್ಲ ಎಂದು ಟೀಕಿಸಿದೆ.

Exit mobile version