Site icon PowerTV

ಫ್ರೀ ಬಸ್ ಪ್ರಯಾಣ ನಿಲ್ಲಲ್ಲ.. ಇದಕ್ಕೆ ನಾನೇ ಗ್ಯಾರಂಟಿ : ಸಿಎಂ ಸ್ಪಷ್ಟನೆ

ಬೆಂಗಳೂರು : ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಸ್ಥಗಿತಗೊಳ್ಳುತ್ತದೆ. ಮಹಿಳೆಯರಿಗೆ ನೀಡಿರುವ ಫ್ರೀ ಬಸ್ ಪ್ರಯಾಣವನ್ನು ಸರ್ಕಾರ ನಿಲ್ಲಿಸುತ್ತದೆ ಎಂಬ ವದಂತಿ ವ್ಯಾಪಕವಾಗಿ ಹಬ್ಬಿದೆ.

ಈ ವದಂತಿಗೆ ಸ್ವಾತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಅವರು, ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಭರವಸೆ ನೀಡಿದ್ದಾರೆ.

ಮುಂದುದುವರಿದು, ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಅಂತ ಅಪಪ್ರಚಾರ ಮಾಡಿದರು. ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಅಂತ ಅಪಪ್ರಚಾರ ಆರಂಭಿಸಿದ್ದಾರೆ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ಸ್ಥಗಿತಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯ ಫೇಕ್ ಫ್ಯಾಕ್ಟರಿ

ಇನ್ನೂ, ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಶಕ್ತಿ ಯೋಜನೆ ಸ್ಥಗಿತಗೊಳ್ಳಲಿದೆ ಅಂತ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದೆ ಬಿಜೆಪಿಯ ಫೇಕ್ ಫ್ಯಾಕ್ಟರಿ. ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಇನ್ನೂ 10 ವರ್ಷ ಇರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸ್ಪಷ್ಟನೆಯ ಸಂದೇಶ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಕುಗ್ಗಿಸಲು ಬಿಜೆಪಿ ನಕಲಿ ಸುದ್ದಿಯ ಮೊರೆ ಹೋಗಿದೆ. ಸಾರ್ವಜನಿಕರು ಇಂತಹ ಯಾವುದೇ ನಕಲಿ ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದೆ.

Exit mobile version