Site icon PowerTV

ನಟ ಉಪೇಂದ್ರ ಅವಹೇಳನಕಾರಿ ಹೇಳಿಕೆ ಸಹಿಸುವುದಿಲ್ಲ: ಸಚಿವ ಪರಮೇಶ್ವರ್​

ಬೆಂಗಳೂರು : ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತಾಡೋದು ಯಾರೇ ಆದರು ನಿಲ್ಲಿಸಬೇಕು. ನಾನ್ಣುಡಿ ಇದೆ ಅಂತ ಹೇಳಿ ಕೀಳಾಗಿ ಮಾತಾಡೋದು ಸರಿಯಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಸಮುದಾಯದ ವಿರುದ್ದ ನಟ ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾಣ್ಣುಡಿ ಹೆಸರಿನಲ್ಲಿ ಜಾತಿವಿಚಾರ ಪ್ರಸ್ತಾಪ ಮಾಡುವುದು ಒಂದು ಸಮುದಾಯಕ್ಕೆ ಮಾಡಿದ ಅವಮಾನ ಅಲ್ಲವಾ?

ಇದನ್ನೂ ಓದಿ: ಬಂಧನದ ಭೀತಿಯಲ್ಲಿ ನಾಪತ್ತೆಯಾದ ನಟ ಉಪೇಂದ್ರ!

ಸಾರ್ವಜನಿಕ ಜೀವನದಲ್ಲಿ ಇದ್ದು ಬೇರೆ ಸಮುದಾಯದ ಬಗ್ಗೆ ಕೀಳಾಗಿ ಮಾತಾಡೋದು ಸರಿಯಲ್ಲ. ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತಾಡೋದು ಯಾರೇ ಆದರು ನಿಲ್ಲಿಸಬೇಕು. ಇದನ್ನ ನಾನು ಕೂಡಾ ಸಹಿಸುವುದಿಲ್ಲ.

ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ ಎರಡು ದೂರಿನ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಪರಿಶಿಷ್ಟ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವ ಸಚಿವರೇ ಆಗಲಿ ಯಾರೇ ಆಗಲಿ ಕಾನೂ‌ನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

Exit mobile version