Site icon PowerTV

10 ರಿಂದ 15 ಹಾಲಿ, ಮಾಜಿ ಶಾಸಕರು ಕಾಂಗ್ರೆಸ್​ಗೆ ಸೇರ್ಪಡೆ: ಸಚಿವ ಚಲುವರಾಯಸ್ವಾಮಿ!

ಬೆಂಗಳೂರು : 10 ರಿಂದ 15 ಜನ ಮಾಜಿ ಹಾಗೂ ಹಾಲಿ‌ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ಧರಿದ್ದಾರೆ  ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ ನಮ್ಮ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಗೊಳ್ಳಲು 10 ರಿಂದ 15 ಮಂದಿ ಮಾಜಿ ಹಾಗು ಹಾಲಿ ಶಾಸಕರು ಸಿದ್ದರಿದ್ದು ಎಲ್ಲರ ಜೊತೆ ಮಾತುಕತೆ ನಡೆಯುತ್ತಿದೆ.

ಇದನ್ನೂ ಓದಿ: ಅಕ್ಕಿ ಬೆಲೆ ಏರಿಕೆ : ಜನಸಾಮಾನ್ಯರಿಗೆ ಮತ್ತೆ ದರ ಏರಿಕೆ ಶಾಕ್!

ಇನ್ನು ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ. ನಮ್ಮ ಪಕ್ಷಕ್ಕೆ ಸೇರ್ಡೆಯಾಗಲು ಸಿದ್ದರಿರುವವರು ಯಾರು, ಅವರ ಹೆಸರು  ಈಗ ಹೇಳಲು ಸಾಧ್ಯವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ನಮ್ಮ ಪಕ್ಷಕ್ಕೆ ಬರುವುದು ಖಚಿತ  ಎನ್ನುವ ಸ್ಪೋಟಕ ಮಾಹಿತಿಯನ್ನು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

Exit mobile version