Site icon PowerTV

1.32 ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ!:ಅಕ್ರಮ ಮಾರಾಟ ಶಂಕೆ

ಮಂಗಳೂರು : ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿರುವ ಘಟನೆ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ  ನಡೆದಿದೆ.

ಒಟ್ಟು 1.32 ಕೋಟಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ನಾಪತ್ತೆಯಾದ ಬಗ್ಗೆ ದ.ಕ. ಜಿಲ್ಲಾ ಪಡಿತರ ಇಲಾಖೆಯ ವ್ಯವಸ್ಥಾಪಕ ಶರತ್ ಕುಮಾರ್ ಎಂಬವರಿಂದ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: ಔಷಧಿಗಳ ಕೊರತೆ ನೀಗಿಸಲು ಮುಂದಾದ ಆರೋಗ್ಯ ಇಲಾಖೆ!

ಇಲಾಖೆಯ ಫಿಸ್ಟ್ ತಂತ್ರಾಂಶದಲ್ಲಿ ದಾಸ್ತಾನು ಪರಿಶೀಲನೆ ನಡೆಸಿದಾಗ ಅಕ್ಕಿ ಗೋಲ್ಮಾಲ್ ಆಗಿರುವ ಬಗ್ಗೆ ಮಾಹಿತಿ ಹೊರಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಗೋದಾಮು ವ್ಯವಸ್ಥಾಪಕ ವಿಜಯ್ ವಿರುದ್ಧ ದೂರು ದಾಖಲು ಮಾಡಲಾಗಿದ್ದು ಅಕ್ರಮವಾಗಿ ಹೊರಗೆ ಮಾರಾಟ ಮಾಡಿರುವ ಶಂಕೆಯನ್ನು ವ್ಯಕ್ತಪಡಿಸಲಾಗಿದೆ.

ಘಟನೆಯ ಕುರಿತು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Exit mobile version