Site icon PowerTV

ಡಿಕೆಶಿಗೆ 50,000 ರೂ. ದಂಡ!

ಬೆಂಗಳೂರು : ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಬಿಬಿಎಂಪಿ 50,000 ರೂಪಾಯಿ ದಂಡ ವಿಧಿಸಿದೆ.

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಹೊರಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಲಾಗಿತ್ತು.

ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.​ ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿ ಉತ್ತರಿಸುವಂತೆ ಸೂಚಿಸಿರುವ ಬಿಬಿಎಂಪಿ ಅಧಿಕಾರಿಗಳು, ಕೆಪಿಸಿಸಿ ಘಟಕದ ಅಧ್ಯಕ್ಷರಿಗೆ ದಂಡವನ್ನು ವಿಧಿಸಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು 50,000 ರೂ.ಗಳ ದಂಡವನ್ನು ಬಿಬಿಎಂಪಿ ಮುಖ್ಯ ಆಯುಕ್ತರ ಖಾತೆಗೆ ದಂಡದ ಮೊತ್ತ ಪಾವತಿಸಬೇಕು ಎಂದು ಸೂಚಿಸಲಾಗಿದೆ.

ನನ್ನದು ಫ್ಲೆಕ್ಸ್ ಹಾಕಂಗಿಲ್ಲ!

ಕಾನೂನು ಬಾಹಿರವಾಗಿ ಫ್ಲೆಕ್ಸ್ ಹಾಕುವಂತಿಲ್ಲ. ಹಾಕಿದ್ರೂ ತೆಗೆದುಹಾಕ್ತೀವಿ. ಫ್ಲೆಕ್ಸ್​ ಹಾಕಿದ್ರೆ 50 ಸಾವಿರ ರೂಪಾಯಿ ದಂಡ ಹಾಕ್ತೀವಿ. ನನ್ನದು, ಸಿಎಂ ಯಾರದ್ದೂ ಹಾಕುವಂತಿಲ್ಲ. ಸರ್ಕಾರದ್ದು ಹಾಕಬೇಕಾದ್ರೆ ಸೀಮಿತ ಅನುಮತಿ ಪಡೆಯುತ್ತೇವೆ. ಇದಕ್ಕೆ ಒಂದು ಪಾಲಿಸಿ ತರಲಾಗುವುದು ಎಂದು ಸ್ವತಃ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದರು.

Exit mobile version