Site icon PowerTV

NEP ರದ್ದುಗೊಳಿಸಲು ತೀರ್ಮಾನ : ಸಿದ್ದರಾಮಯ್ಯ

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ (NEP)ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಅವರು, ದೇಶದಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಲು ಸಾಧ್ಯವಿಲ್ಲ. ಅಲ್ಲದೆ NEPಯು ಮಧ್ಯ ಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಜಾರಿಯಾಗಿಲ್ಲ ಎಂದು ಹೇಳಿದ್ದಾರೆ.

ನಾವೂ ಕೂಡ NEP ರದ್ದುಗೊಳಿಸಿ, ವಾರದೊಳಗೆ ಸಮಿತಿ ರಚಿಸುತ್ತೇವೆ. ಆ ಮೂಲಕ ರಾಜ್ಯ ಶಿಕ್ಷಣ ನೀತಿ ರೂಪಿಸುತ್ತೇವೆ. ಪದವೀಧರರು ಧರ್ಮದಿಂದ ಪ್ರಭಾವಿತರಾಗಬಾರದು ಅಂತ ಅಭಿಪ್ರಾಯಪಟ್ಟಿದ್ದಾರೆ. ಇದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಪುನರ್ ವಿಮರ್ಶೆ ಮಾಡುತ್ತಿದ್ದೇವೆ. ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ದತಿ ಜಾರಿಗೆ ತರಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಬೇರೆ ಬೇರೆ ಭಾಷೆ ಸಂಸ್ಕೃತಿ ಮತ್ತಿತರರ ಕಾರಣದಿಂದ ನಮ್ಮ ದೇಶದಲ್ಲಿ ಏಕರೂಪ ಶಿಕ್ಷಣ ಪದ್ದತಿ ಜಾರಿ ಸಾದ್ಯವಿಲ್ಲ. ಕುಲಪತಿಗಳು ಸಾಮಾಜಿ ಆರ್ಥಿಕ‌ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು NEP ರದ್ದಿನ ಬಗ್ಗೆ ಸಭೆಯಲ್ಲಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಕುಲಪತಿಗಳಿಗೆ ಸಿದ್ದರಾಮಯ್ಯ ಸ್ಪಷ್ಟನೆ

Exit mobile version