Site icon PowerTV

ಕೆಆರ್​ಎಸ್​​ ವೀಕ್ಷಣೆಗೆ ಬಂದ ಪ್ರವಾಸಿಗರ ಮೇಲೆ ಹುಚ್ಚುನಾಯಿಗಳು ದಾಳಿ!

ಮಂಡ್ಯ : ಹುಚ್ಚುನಾಯಿಗಳು ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ಘಟನೆ ಮೈಸೂರಿನ ಕೆಆರ್​ಎಸ್​ ಬೃಂದಾವನದಲ್ಲಿ ನಡೆದಿದೆ.

ಇದನ್ನೂ ಓದಿ: ವಿಚಾರಣೆ ಬಂದ ಪೊಲೀಸರ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆಗೆ ಮುಂದಾದ ಮಹಿಳೆ!

ವಿಶ್ವ ಪ್ರಸಿದ್ದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್​ಎಸ್​ ಬೃಂದಾವನದಲ್ಲಿ ಹುಚ್ಚುನಾಯಿಗಳ ಹಾವಳಿ ಮಿತಿಮೀರಿದೆ, ಬೃಂದಾವನ ವೀಕ್ಷಣೆಗೆ ಬಂದ ಐವರು ಪ್ರವಾಸಿಗರ ಮೇಲೆ ಹುಚ್ಚುನಾಯಿಗಳು ಏಕಾಏಕಿ ದಾಳಿ ನಡೆಸಿದ್ದು ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ನಾಯಿಗಳ ಹಾವಳಿ ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಪ್ರವಾಸಿಗರು ಮತ್ತು ಇಲ್ಲಿನ ಸಾರ್ವಜನಿಕರು ‌ಆಕ್ರೋಶ ವ್ಯಕ್ತಿಪಡಿಸಿದ್ದಾರೆ.

Exit mobile version