Site icon PowerTV

ಎಸ್.ಟಿ ಸೋಮಶೇಖರ್​​ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ: ಯಶವಂತಪುರದ ಜೆಡಿಎಸ್ ಕಾರಕರ್ತರ ಸಭೆ ಇಂದು

ಬೆಂಗಳೂರು: ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ  ಶಾಸಕ ಎಸ್.ಟಿ.ಸೋಮಶೇಖರ್ ಅವರ ಬೆಂಬಲಿಗರು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಸೋಮಶೇಖರ್​ ಕಾಂಗ್ರೆಸ್‌ಗೆ ವಲಸೆ ಹೋಗಬಹುದು ಎಂಬ ವದಂತಿ ದಟ್ಟವಾಗುತ್ತಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜೆಡಿಎಸ್ ಪಕ್ಷವು ತನ್ನ ಸಂಘಟನೆ ಬಲಪಡಿಸಲು ಮುಂದಾಗಿದೆ.

ಇದನ್ನೂ ಓದಿ : ‘ಅಕ್ಬರ್-ಬೀರಬಲ್ಲನ ಕಥೆ’ ಹೇಳಿ ಬಿಜೆಪಿ ಕಾಲೆಳೆದ ಡಿಕೆಶಿ

ಈ ಹಿನ್ನೆಲೆಯಲ್ಲಿ ಮಂಗಳವಾರ ಕ್ಷೇತ್ರದ ತಾವರೆಕೆರೆ ಹೋಬಳಿ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಕರೆ ಯಲಾಗಿದ್ದು, ಪಕ್ಷದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಾಗಡಿ ಮುಖ್ಯ ರಸ್ತೆಯ ಬೈಚಗುಪ್ಪೆಗೇಟ್ ಬಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಈ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಪಕ್ಷದ ಪರಾಜಿತ ಅಭ್ಯರ್ಥಿ ಟಿ. ಎನ್.ಜವರಾಯಿಗೌಡ, ಸಹಸ್ರಾರು ಸಂಖ್ಯೆಯಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

Exit mobile version