Site icon PowerTV

ಚಂದ್ರಯಾನ-3 ಸಕ್ಸಸ್ ಬಳಿಕ ಪ್ರಕಾಶ್ ರೈ ಟ್ವೀಟ್

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲಿಳಿದು ಇತಿಹಾಸ ಬರೆದಿದೆ. ಈ ಕುರಿತು ಬಹುಭಾಷಾ ನಟ ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ.

ಇದು ಭಾರತದ ಹಾಗೂ ಮನುಕುಲದ ಹೆಮ್ಮೆಯ ಕ್ಷಣಗಳಿವು. ಇಸ್ರೋ, ಚಂದ್ರಯಾನ, ವಿಕ್ರಮ್ ಲ್ಯಾಂಡರ್ ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು.. ಸಂಭ್ರಮಿಸಲು.. ಇದು ದಾರಿಯಾಗಲಿ ಎಂದು ಪ್ರಕಾಶ್ ರೈ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಚಂದ್ರಯಾನ-3 ಹಾಗೂ ಇಸ್ರೋ ಮಾಜಿ ಮುಖ್ಯಸ್ಥರ ಬಗ್ಗೆ ನಟ ಪ್ರಕಾಶ್‌ ರೈ ಲೇವಡಿ ಮಾಡಿ ನೆಟ್ಟಿಗರ ಆಕ್ರೋಶಕ್ಕೆ ಒಳಗಾಗಿದ್ದರು. ನೀವು ತುಂಬಾ ಕೆಳಮಟ್ಟಕ್ಕೆ ಇಳಿದಿದ್ದೀರಿ. ನೀವು ನಿಜಕ್ಕೂ ಭಾರತೀಯರಾ?ಎಂದು ನೆಟ್ಟಿಗರು ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದರು.

Exit mobile version