Site icon PowerTV

ಅಕ್ರಮ ಆಸ್ತಿ ಪತ್ತೆ ಪ್ರಕರಣ: ಕೆ.ಟಿ ಶ್ರೀನಿವಾಸ್​ ಬಂಧನ!

ಬೆಂಗಳೂರು : ಆದಾಯಕ್ಕಿಂತ ಅಧಿಕ ಆಸ್ತಿಗಳಿಕೆ ಆರೋಪದಡಿ  ಕೆ ಆರ್​ ಪುರಂ ತಾಲ್ಲೂಕು ಕಚೇರಿಯ ಸರ್ವೆ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ಮೂರ್ತಿಯನ್ನು ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕಿಂತ ಅಧಿಕ ಆಸ್ತಿಗಳಿಕೆ ಆರೋಪ ಮಾಡಿ ಸಾರ್ವಜನಿಕರಿಂದ  ದೂರುಗಳು ಬಂದ ಹಿನ್ನೆಲೆ ನಿನ್ನೆ ಶ್ರೀನಿವಾಸ್ ಗೆ ಸಂಬಂಧಿಸಿ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು.

ಶ್ರೀನಿವಾಸ್​ ಮೂರ್ತಿಗೆ ಸಂಬಂಧಿಸಿದ ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯದ ಒಟ್ಟು 14 ಕಡೆ ಲೋಕಾ ದಾಳಿ ವೇಳೆ ಲೋಕಾಯುಕ್ತ ಮೂರು ಕೋಟಿಗೂ ಅಧಿಕ ಆಸ್ತಿ ಪಾಸ್ತಿ ಪತ್ತೆಯಾಗಿತ್ತು. ಈ ಸಂಬಂಧ ಲೋಕಾಯುಕ್ತ ಅಧಿಕಾರಿಗಳಿಂದ ಶ್ರೀನಿವಾಸಮೂರ್ತಿಯನ್ನು ಇಂದು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿ ವಶಕ್ಕೆ ಪಡೆಯಲು ಅಧಿಕಾರಿಗಳು ನಿರ್ಧಾರ ಮಾಡಿದ್ದಾರೆ.

Exit mobile version