Site icon PowerTV

ಒಂದು ಬಟನ್ ಒತ್ತಿದ್ರೆ ದುಡ್ಡು ಜಮಾ ಆಗುತ್ತೆ : ಡಿ.ಕೆ ಶಿವಕುಮಾರ್

ಮೈಸೂರು : ಆಗಸ್ಟ್ 30ರಂದು ಒಂದು ಬಟನ್ ಅದುಮಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೆಸೇಜ್ ಅವರ ಮೊಬೈಲ್ ನಂಬರ್​ಗಳಿಗೆ ಬರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮಲ್ಲಿ ಹಣದ ಕೊರತೆ ಇಲ್ಲ. ಎಲ್ಲಾ ಹಣವನ್ನು ಬಾಂಕ್​ಗೆ ಡೆಪಾಸಿಟ್ ಮಾಡಿದ್ದೇವೆ‌. ಸರ್ವರ್ ಸಮಸ್ಯೆ ಆದರೆ ಒಂದಿಷ್ಟಿ ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆದ ವಿಚಾರವಾಗಿ ಮಾತನಾಡಿ, ಈ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ. ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲಾನ್ ಮಾಡುತ್ತಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಲ್ಲಿ ಟ್ರಾಫಿಕ್ ಉಂಟಾಗುತ್ತೆ

ಬೆಳಗಾವಿಯಲ್ಲಿ ನಾವು ಎರಡು ಲೋಕಸಭಾ ಕ್ಷೇತ್ರ ಗೆಲ್ಲುತ್ತೇವೆ‌. ಮೈಸೂರಿನಲ್ಲಿ ಅನ್ನಭಾಗ್ಯ ಕಾರ್ಯಕ್ರಮ ಮಾಡುವ ಪ್ಲಾನ ಇತ್ತು. ಅಕ್ಕಿ ವಿಚಾರದಲ್ಲಿ ಒಂದಷ್ಟು ಅಡೆತಡೆ ಇದೆ. ಹೀಗಾಗಿ, ಗೃಹಲಕ್ಷ್ಮೀಯನ್ನು ಇಲ್ಲಿಂದ ಆರಂಭಿಸುತ್ತಿದ್ದೇವೆ. ಬೆಂಗಳೂರಿನಲ್ಲೂ ಕಾರ್ಯಕ್ರಮ ಮಾಡುವ ಯೋಚನೆ ಮಾಡಿದ್ದೇವೆ. ಆದರೆ, ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ ಅಂತ ಮೈಸೂರಿಗೆ ಶಿಫ್ಟ್ ಮಾಡಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

Exit mobile version