Saturday, August 23, 2025
Google search engine
HomeUncategorizedತಿಮ್ಮ, ಬೋರ, ಕಾಳನ ಜೇಬಿನಲ್ಲಿ ದುಡ್ಡು ಇರಬೇಕು : ಸಿದ್ದರಾಮಯ್ಯ

ತಿಮ್ಮ, ಬೋರ, ಕಾಳನ ಜೇಬಿನಲ್ಲಿ ದುಡ್ಡು ಇರಬೇಕು : ಸಿದ್ದರಾಮಯ್ಯ

ಬೆಂಗಳೂರು : ಅದಾನಿ, ಅಂಬಾನಿ ‌‘ಕೈ’ಗೆ ಅಧಿಕಾರ ‌ಕೊಟ್ಟು ಎಲ್ಲಿಗೆ ಬಂತು ಸ್ವಾತಂತ್ರ್ಯ ಅಂದ್ರೆ ಹೇಗೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಹಮ್ಮಿಕೊಂಡಿದ್ದ ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಿದ್ದಲಿಂಗಯ್ಯ ಅವರ ಪುತ್ಥಳಿ ಲೋಕಾರ್ಪಣೆಗೊಳಿಸಿ  ಮಾತನಾಡಿದರು.

ಬರೀ ಅಂಬಾನಿ, ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರ, ಮಧ್ಯಮ ವರ್ಗದವರ ಉದ್ಧಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ. ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ ಎಂದರು.

ಜನರ ಜೇಬಿಗೆ ಹಣ ಹಾಕುವ ಕೆಲಸ

ಕೇವಲ ಅಂಬಾನಿ, ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡೀ ದೇಶ ಪರಿತಪಿಸುವಂತಾಗಿದೆ. ಈ ಕಾರಣಕ್ಕೆ ನಾವು ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ಹೇಳಿದರು.

ಎಲ್ಲಿಗೆ ಬಂತು 47 ಸ್ವಾತಂತ್ರ್ಯ?

ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ? ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು? ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ? ಎಂದು ಪ್ರಶ್ನಿಸಿದರೆ ಹೇಗೆ? ಎಂದು ಕಿಡಿಕಾರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments