Site icon PowerTV

ಬಿಟ್ಟಿ ಭಾಗ್ಯಗಳಿಗೆ ಬೊಕ್ಕಸ ಲೂಟಿ : ಯತ್ನಾಳ್

ವಿಜಯಪುರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ 11,114 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವ ನಡೆ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯ ಸರ್ಕಾರ ಬಿಟ್ಟಿ ಭಾಗ್ಯಗಳನ್ನು ಪೂರೈಸಲು ಬೊಕ್ಕಸವನ್ನು ಲೂಟಿ ಮಾಡುತ್ತಿದೆ ಎಂದು ಕುಟುಕಿದ್ದಾರೆ.

ಪರಿಶಿಷ್ಟ ಜಾತಿ, ವರ್ಗದ ಅಭಿವೃದ್ಧಿಗೆ, ಕಲ್ಯಾಣಕ್ಕೆ ಮೀಸಲಿಟ್ಟದ್ದ ಹಣವನ್ನು ಕಾಂಗ್ರೆಸ್​ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದೆ. ಈ ಮೂಲಕ ಸಂವಿಧಾನ ವಿರೋಧಿ ಕೆಲಸ ಮಾಡುತ್ತಿರುವುದು ರಾಜ್ಯದ ದುರಂತವೇ ಸರಿ ಎಂದು ಟೀಕಿಸಿದ್ದಾರೆ.

ಆರ್ಥಿಕ ಶಿಸ್ತು, ಆರ್ಥಿಕ ನೀತಿಗಳ ಹರಿಕಾರ, ಅತಿ ಹೆಚ್ಚು ಬಜೆಟ್ ಕೊಟ್ಟ ಮುಖ್ಯ ಮಂತ್ರಿಗಳು, ಅನಗತ್ಯ ಖರ್ಚು, ವೆಚ್ಚಗಳಿಗೆ ಕಡಿವಾಣ ಹಾಕಿದ ಸಿಎಂ ಎಂದೆಲ್ಲ ತಮ್ಮ ಹೊಗಳು ಭಟ್ಟರಿಂದ ಕರೆಸಿಕೊಳ್ಳುತ್ತಾರೆ. ಅಂತಹ ಮುಖ್ಯಮಂತ್ರಿಗಳು ನಮ್ಮ ರಾಜ್ಯವನ್ನು ಆರ್ಥಿಕ ದಿವಾಳಿಯತ್ತ ಕೊಂಡೊಯ್ಯುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಯತ್ನಾಳ್ ಗುಡುಗಿದ್ದಾರೆ.

Exit mobile version