Site icon PowerTV

ಮತ್ತೆ ಕನ್ನಡಿಗರ ಆಕ್ರೋಶಕ್ಕೆ ಗುರಿಯಾದ ರಶ್ಮಿಕಾ

ಬೆಂಗಳೂರು : ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ, ರಶ್ನಿಕಾ ಮಾಡಿರುವ ಎಡವಟ್ಟಿಗೆ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.

ನಿನ್ನೆ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಚಿತ್ರ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ರಕ್ಷಿತ್​ ಶೆಟ್ಟಿ ಅವರ ಕಿರಿಕ್ ಪಾರ್ಟಿ ಚಿತ್ರದ ಮೂಲಕವೇ ಖ್ಯಾತಿ ಪಡೆದಿರುವ ರಶ್ಮಿಕಾ ಮಂದಣ್ಣ, ಕನ್ನಡ ಹೊರತುಪಡಿಸಿ ಇತರೆ ಎಲ್ಲಾ ಭಾಷೆಗಳ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ತಿಳಿಸಿದ್ದಾರೆ.

 

 

Exit mobile version