Wednesday, September 3, 2025
HomeUncategorizedಬಿಪಿಎಲ್​ ಕಾರ್ಡ್​ ರದ್ದುಮಾಡುವುದಿಲ್ಲ : ಸಚಿವ ಕೆ.ಹೆಚ್​ ಮುನಿಯಪ್ಪ

ಬಿಪಿಎಲ್​ ಕಾರ್ಡ್​ ರದ್ದುಮಾಡುವುದಿಲ್ಲ : ಸಚಿವ ಕೆ.ಹೆಚ್​ ಮುನಿಯಪ್ಪ

ಹಾಸನ : ರಾಜ್ಯದಲ್ಲಿ ಅಧಿಕೃತ ಬಿಪಿಎಲ್​ ಕಾರ್ಡ್​ಗಳನ್ನು ರದ್ದುಮಾಡುವುದಿಲ್ಲ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್​ ಮುನಿಯಪ್ಪ ತಿಳಿಸಿದರು.

ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಅರ್ಜಿ ಹಾಕಿದ್ದ 3 ಲಕ್ಷ ಜನರಿಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚನೆ ನೀಡಲಾಗಿದೆ. ಇನ್ನು ಮೂರು ತಿಂಗಳಲ್ಲಿ ಎಲ್ಲಾ ಅರ್ಹ ರಿಗೆ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ನೀಡಲಾಗುತ್ತೆ. ಕೆಲವರಿಗೆ ಬ್ಯಾಂಕ್ ಖಾತೆ ಇಲ್ಲದೆ ಕೆಲ ಕಾರ್ಡ್ ರದ್ದಾಗಿತ್ತು ಈ ಬಗ್ಗೆ ಕೂಡ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: ಮೋದಿ ವೀಕ್ಷಣೆಗೆ ಜನಸಾಮಾನ್ಯರಂತೆ ರಸ್ತೆಪಕ್ಕದಲ್ಲಿ ನಿಂತ ರಾಜ್ಯ ಬಿಜೆಪಿ ನಾಯಕರು!

ನಾಲ್ಕು ಚಕ್ರ ವಾಹನ ಇದ್ದರೆ ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ನಿಯಮ ಬಿಜೆಪಿ ಸರ್ಕಾರದ ಅವದಿಯದ್ದು ಸಧ್ಯಕ್ಕೆ ಈ ವಿಚಾರದಲ್ಲಿ ಯಾವುದೆ ತೀರ್ಮಾನ ಇಲ್ಲಾ. 1.28 ಕೋಟಿ ಪಡಿತರ ಕಾರ್ಡ್ ದಾರರಿದಾರೆ ಎಲ್ಲವನ್ನು ಪರಿಶೀಲನೆ ಮಾಡಿ ಎಲ್ಲರಿಗು ಅಕ್ಕಿ ವಿತರಣೆ ಬಗ್ಗೆ ಕ್ರಮ ವಹಿಸುತ್ತೇವೆ. ಯಾರು ಅರ್ಹರಿರ್ತಾರೆ ಅವರಿಗೆ ಯಾವುದೇ ತೊಂದರೆ ಆಗೋದಿಲ್ಲ ಎಂದು ಸಚಿವರ ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments