Site icon PowerTV

ರಾಜ್ಯದಲ್ಲಿ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಶುರುವಾಗಿದೆ: ಹೆಚ್​ಡಿಕೆ ಕಿಡಿ

ಹಾಸನ : ಮಂತ್ರಿಗಳು ಲೋಡ್ ಶೆಡ್ಡಿಂಗ್ ಅವಶ್ಯಕತೆ ಇಲ್ಲ ಎನ್ನುತ್ತಾರೆ. ಯಾವ ಸಮಯದಲ್ಲಿ ವಿದ್ಯುತ್ ಕೊಡುತ್ತಾರೆ ಎಂದು ಹಳ್ಳಿ‌ಜನ ಕಾಯುತ್ತಾ ಕೂರಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಚಾಟಿ ಬೀಸಿದರು.

ಹಾಸನದಲ್ಲಿ ಮಾತನಾಡಿದ ಅವರು, ನಾನು ಸರಕಾರಕ್ಕೆ ಹೇಳುವುದು ಇಷ್ಟೇ. ನಿಮ್ಮ‌ ಗ್ಯಾರಂಟಿ ಸ್ಕೀಂಗಳನ್ನು ಮಾಡಿಕೊಂಡು ಹೋಗಿ, ಸಂತೋಷ. ಅದು ಎಷ್ಟರಮಟ್ಟಿಗೆ ನಿಮ್ಮ ಗ್ಯಾರಂಟಿ ಸ್ಕೀಂಗಳಿಂದ ಇಡೀ ನಾಡಿನ ಜನತೆಗೆ ಅನೂಕೂಲ ಆಗುತ್ತಿದೆ ಎಂಬುದನ್ನು ಕಾದು ನೋಡೋಣ. ಅದಾನಿ, ಅಂಬಾನಿಗೆ ಸೇರುವ ದುಡ್ಡನ್ನು ಪ್ರತಿಯೊಬ್ಬರಿಗೂ ಹಂಚುತಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅದ್ಯಾರಿಗೆ ಹಂಚುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ಗೃಹಜ್ಯೋತಿ ಹೆಸರಿನಲ್ಲಿ ಜನರಿಗೆ ಟೋಪಿ ಹಾಕುವುದುನ್ನು ಪ್ರತಿನಿತ್ಯ ಕಾಣುತ್ತಿದ್ದೇವೆ. ಈಗಾಗಲೇ ಅನಧಿಕೃತ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಮಂತ್ರಿಗಳು ಲೋಡ್ ಶೆಡ್ಡಿಂಗ್ ಅವಶ್ಯಕತೆ ಇಲ್ಲ ಎನ್ನುತ್ತಾರೆ. ಯಾವ ಸಮಯದಲ್ಲಿ ವಿದ್ಯುತ್ ಕೊಡುತ್ತಾರೆ ಎಂದು ಹಳ್ಳಿ‌ಜನ ಕಾಯುತ್ತಾ ಕೂರಬೇಕಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಸರಕರಾಕ್ಕೆ ಚಾಟಿ ಬೀಸಿದರು.

ಇದನ್ನೂ ಓದಿ: ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ

ಅನಧಿಕೃತ ಲೋಡ್ ಶೆಡ್ಡಿಂಗ್ʼಗೆ ಯಾವುದೇ ರೀತಿಯ ಸಿದ್ದತೆಗಳಿಲ್ಲ, ಮುಂದೆ ಆಗುವ ಸಮಸ್ಯೆಗಳ ಬಗ್ಗೆ ಚಿಂತನೆಯೂ ಇಲ್ಲ. ಮೊದಲು ರೈತರ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಯೋಚನೆ ಮಾಡಬೇಕಿತ್ತು ಇವರು. 130 ತಾಲ್ಲೂಕುಗಳಲ್ಲಿ ಬರದ ಛಾಯೆ ಮೂಡಿದೆ ಅಂತ ಕೃಷಿಮಂತ್ರಿಗಳೇ ಹೇಳೀದ್ದಾರೆ. ಭಿತ್ತನೆ ಸಂಪೂರ್ಣ ನಾಶವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಗ್ಯಾರೆಂಟಿ ಎಂದು ವಿಜೃಂಭಿಸುವುದನ್ನು ಬಿಟ್ಟು ಮೊದಲು ರೈತರ ಬದುಕು ಏನಾಗಿದೆ ಎಂಬುದನ್ನು ನೋಡಲಿ ಎಂದು ಅವರು ಒತ್ತಾಯ ಮಾಡಿದರು.

ಕಾವೇರಿ ವಿಷಯದಲ್ಲಿ ಸರ್ಕಾರ ತಪ್ಪು ಮಾಡಿದೆ :

ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರ ನಮ್ಮ ರೈತರ ಹಿತ ಕಡೆಗಣಿಸಿದೆ. ಸರ್ವಪಕ್ಷದ ಸಭೆಯಲ್ಲೂ‌ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ನನ್ನ ಅಭಿಪ್ರಾಯವನ್ನು ನೇರವಾಗಿ ಹೇಳಿದ್ದೇನೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ನೀರು ಬಿಡಿ ಎಂದಾಗಲೇ ಸರ್ವಪಕ್ಷದ ಸಭೆ ಕರೆದು ಚರ್ಚೆ ಮಾಡಬೇಕಿತ್ತು. ಸುಪ್ರೀಂ ಕೋರ್ಟ್‌ಗೆ ತಮಿಳುನಾಡಿನವರು ಅರ್ಜಿ ಹಾಕಿಕೊಂಡಾಗ ತೀರ್ಪು ಬರುವವರೆಗೂ ಕಾಯಬೇಕಿತ್ತು. ಏಕಾಏಕಿ ನೀರು ಬಿಟ್ಟುಬಿಟ್ಟರು, ನಂತರ ರೈತರು ಪ್ರತಿಭಟನೆ ಮಾಡಲು ಹೋದಾಗ ʼನೀವು ಕೋರ್ಟ್‌ಗೆ ಕೇಸ್ ಹಾಕಿಕೊಳ್ಳಿʼ ಎಂದು ಉಪ ಮುಖ್ಯಮಂತ್ರಿ ಹೇಳಿದರು. ಇಂಥ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಿ ಎಂದು ಸಭೆಯಲ್ಲಿ ನೇರವಾಗಿಯೇ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

Exit mobile version