Site icon PowerTV

ನಿಖಿಲ್ ರಾಜಕೀಯ ಭವಿಷ್ಯದ ಬಗ್ಗೆ HDK ಮಹತ್ವದ ಘೋಷಣೆ

ಮಂಡ್ಯ : ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಹೇಳೀಕೆ ನೀಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಿಖಿಲ್‌ಗೆ ಸಲಹೆ ನೀಡಿದ್ದೇನೆ. ರಾಜಕೀಯದ ಸಹವಾಸ ಹೋಗಬೇಡ ಅಂತ ಎಂದು ಸ್ಪಷ್ಟಪಡಿಸಿದ್ದಾರೆ.

ನಿನಗೆ ಭಗವಂತ ಕೊಟ್ಟಿರೋ ಕಲೆ ಸಿನಿಮಾ ಮಾಡು. ದಯವಿಟ್ಟು ರಾಜಕೀಯ ಜಂಗುಳಿ ಬಿಟ್ಟು ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು ಹೇಳಿದ್ದೇನೆ. ನಿಖಿಲ್ ಚುನಾವಣೆಗೆ ನಿಲ್ಲುವ ಪ್ರಶ್ನೆ ಇಲ್ಲ. ಹೀಗಾಗಲೇ ಮೂರು ಚಿತ್ರಗಳನ್ನು ನಿರ್ಮಾಣ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಸಿನಿಮಾ ಮಾಡಲು ನಿಖಿಲ್ ಮುಖ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಒತ್ತಡದಿಂದ ಚುನಾವಣೆಗೆ ತಲೆ ಕೊಟ್ಟ

ನೀಖಿಲ್ ಈಗಾಗಲೇ ಎರಡು ಬಾರಿ‌ ಸೋತಿದ್ದಾನೆ. ಮಂಡ್ಯ ಎಂಪಿಗೆ ನಿಲ್ಲೂವಾಗಲೂ ಬೇಡಾ ಅಂದಿದ್ದೆ. ನಿಖಿಲ್ ಮಂಡ್ಯದಲ್ಲಿ ನಿಲ್ಲಲು ತಯಾರು ಇರಲಿಲ್ಲ. ಶಾಸಕರು ಹಾಗೂ ಕಾರ್ಯಕರ್ತರ ಒತ್ತಡದಿಂದ ಚುನಾವಣೆಗೆ ತಲೆ ಕೊಟ್ಟ. ಸೋಲು ಗೆಲುವು ಇರುತ್ತೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ. ದೇವೇಗೌಡರು, ನಾನು ಎಲ್ಲರೂ ಸೋತಿದ್ದೇವೆ. ಜನಾಭಿಪ್ರಾಯ ಏನು ಇದೆ ಅದಕ್ಕೆ ತಲೆಬಾಗಬೇಕು ಎಂದು ತಿಳಿಸಿದ್ದಾರೆ.

ಭಗವಂತ ನಿಖಿಲ್‌ಗೆ ಕಲೆ ಕೊಟ್ಟಿದ್ದಾನೆ

ನಾನು ಒತ್ತಡಗಳ ಮೇಲೆ ಚುನಾವಣೆ ಮಾಡಲ್ಲ. ಸದ್ಯಕ್ಕೆ ನಿಖಿಲ್‌ಗೆ ರಾಜಕೀಯ ಬೇಡಾ ಅಂತ ಹೇಳಿದ್ದೇನೆ. ಮುಂದೆ ನೋಡೋಣಾ, ಅವನ ಹಣೆಯಲ್ಲಿ ಬರೆದಿದ್ರೆ ನಾನು ತಪ್ಪಿಸೋಕೆ‌ ಆಗಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನಿನ್ನ ಜೀವನ ರೂಪಿಸಿಕೋ ಅಂತ ನಿಖಿಲ್‌ಗೆ ಹೇಳಿದ್ದೇನೆ. ಭಗವಂತ ನಿಖಿಲ್‌ಗೆ ಒಂದು ಕಲೆ ಕೊಟ್ಟಿದ್ದಾನೆ. ಆ ಕಲೆಯಲ್ಲಿ‌ ಮುಂದುವರೆಯಪ್ಪಾ ಅಂತ ಹೇಳಿದ್ದೇನೆ. ಯಾವುದೇ ಕಾರಣಕ್ಕೂ ಮುಂದಿನ ಐದು ವರ್ಷ ಚುನಾವಣೆಗೆ ತರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಿಖಿಲ್ ಕುತಂತ್ರಕ್ಕೆ ಬಲಿಯಾಗಿದ್ದಾನೆ

ನಿಖಿಲ್ ಕುತಂತ್ರಕ್ಕೆ ಬಲಿಯಾಗಿದ್ದಾನೆ. ಇದೀಗ ಅದೇ ಜನ ಪಶ್ಚಾತ್ತಾಪ ಪಡುವಂತೆ ಆಗಿದೆ. ಇದೇ ರಾಮನಗರದ ಜನರು ಎಲ್ಲಾ ನೋಡ್ತಾ ಇದ್ದಾರೆ. ರಾಮನಗರವನ್ನು ಹೇಗೆ ಉದ್ಧಾರ ಮಾಡ್ತಾ ಇದಾರೆ ಅಂತ ನೋಡ್ತಾ ಇದೀನಿ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.

Exit mobile version