Site icon PowerTV

ವಿಶ್ವ ಅಥ್ಲೆಟಿಕ್ಸ್​ ನಲ್ಲಿ ನೀರಜ್ ಚಿನ್ನದ ಸಾಧನೆ: ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್’ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಬಂಗಾರಕ್ಕೆ ಪದಕ ಪಡೆದ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಪ್ರತಿಭಾನ್ವಿತ ನೀರಜ್ ಚೋಪ್ರಾಗೆ ಅಭಿನಂದಿಸಿದ್ದಾರೆ. ಹಂಗೇರಿಯ ಬುಡಾಪೆಸ್ಟ್ ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಫೈನಲ್ ಪಂದ್ಯದಲ್ಲಿ 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಟ್ವೀಟ್​ ಮಾಡುವ ಮೂಲಕ ನೀರಜ್​ ಅವರನ್ನು ಅಭಿನಂದಿಸಿದ್ದಾರೆ.

ಮೊದಲ ಸುತ್ತಿನಲ್ಲೇ ಎಡವಿದ ನೀರಜ್, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿದ್ದಾರೆ.

Exit mobile version