Site icon PowerTV

ಪಾಲ್ಸ್​ನಲ್ಲಿ ಈಜಲು ಹೋದ ಯುವಕ ನೀರುಪಾಲು

ಮಂಡ್ಯ : ಈಜಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಗಾಣಾಳು ಪಾಲ್ಸ್​ನಲ್ಲಿ ನಡೆದಿದೆ.

ಮನು ಕುಮಾರ್(27) ಮೃತ ದುರ್ದೈವಿ ಯುವಕ. ಈತ ಮಂಡ್ಯ ತಾಲ್ಲೂಕಿನ ಸಬ್ಬನಹಳ್ಳಿ ಗ್ರಾಮದವನಾಗಿದ್ದು, ಖಾಸಗಿ ಬಸ್​ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಮೃತ ಮನು ಸ್ನೇಹಿತರೊಂದಿಗೆ ಪಾಲ್ಸ್ ನೋಡಲು ಹೋಗಿದ್ದ. ಈ ವೇಳೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯವರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕಳೆದೆರಡೂ ದಿನಗಳಿಂದ ಮೃತ ಯುವಕನ ಶವಕ್ಕಾಗಿ ಹುಡುಕಾಟ ನಡೆಸಲಾಗಿತ್ತು. ಇಂದು ಮೃತ ಯುವಕನ ಶವ ನೀರಿನಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮಳವಳ್ಳಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮೃತ ದೇಹ ರವಾನೆ ಮಾಡಲಾಗಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version