Site icon PowerTV

ಮೋದಿ ಗೆಲುವಿಗೆ ‘ನಮೋ ಬ್ರಿಗೇಡ್ 2.0’ ಪ್ರಚಾರ : ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ’ ನಮೋ ಬ್ರಿಗೇಡ್’ ಹೆಚ್ಚಿನ ಕೆಲಸ ಮಾಡಲಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಿಲ್ಲಾ ಮಟ್ಟದ ಸಭೆಯನ್ನು ಖುದ್ದಾಗಿ ನಾನೇ ನಡೆಸಿದ್ದೇನೆ. ತಾಲ್ಲೂಕು ಮಟ್ಟದಲ್ಲೂ ಕೂಡ ನಮೋ ಬ್ರಿಗೇಡ್ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಕಡಿಮೆಯಾಗಿಲ್ಲ. ಲೋಕಸಭಾ ಚುನಾವಣೆಗೆ 5 ತಿಂಗಳ ಮುನ್ನ ನಮ್ಮ ಕಾರ್ಯ ಶುರು ಆಗಲಿದೆ. ಚುನಾವಣೆಯ ಕೊನೆಯ ಎರಡು ತಿಂಗಳಲ್ಲಿ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ನಮೋ ಬ್ರಿಗೇಡ್ 2.0 ಪ್ರಚಾರ ನಡೆಸಲಿದೆ. ಮೋದಿಯವರ ಕಾರ್ಯ ಸಾಧನೆಗಳನ್ನು ಜನತೆಯ ಮುಂದಿಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಜನರಿಗೆ ಪ್ರಧಾನಿ ಮೋದಿ ಮಾಡಿದ ಒಳ್ಳೆಯ ಕೆಲಸಗಳ ಬಗ್ಗೆ, ದೇಶಕ್ಕೆ ಬರುವ ಆತಂಕದ ವಿಷಯಗಳ ಬಗ್ಗೆ ಮಾಹಿತಿ ನೀಡಲು ಈ ಉಪನ್ಯಾಸ ಕಾರ್ಯಕ್ರಮ. ದೇಶದ ಹಿತದೃಷ್ಟಿಯಿಂದ ಇಂತಹ ಉಪನ್ಯಾಸ ಕಾರ್ಯಕ್ರಮ ಅನಿವಾರ್ಯ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

Exit mobile version