Site icon PowerTV

ಬೆಂಗಳೂರಿಗೆ ಬಂದಿಳಿದ ರಾಹುಲ್ ಗಾಂಧಿ

ಬೆಂಗಳೂರು : ಇಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರುನಾಡಿಗೆ ಆಗಮಿಸಿದ್ದಾರೆ.

ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಟ ರಾಹುಲ್ ಗಾಂಧಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ರಾಹುಲ್ ಗಾಂಧಿ KIALಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 11.40 ಕ್ಕೆ ಮೈಸೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ, ಮಹಾರಾಜ ಕಾಲೇಜು ಆವರಣದಲ್ಲಿ 12 ಗಂಟೆಗೆ ನಡೆಯಲಿರುವ ಗೃಹಲಕ್ಷ್ಮೀ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Exit mobile version