Site icon PowerTV

ಕುಮಾರಸ್ವಾಮಿ ದಿಢೀರ್ ಆಸ್ಪತ್ರೆಗೆ ದಾಖಲು!

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಬೆಳಗಿನ ಜಾವ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅನಾರೋಗ್ಯದ ಹಿನ್ನೆಲೆ ಕುಮಾರಸ್ವಾಮಿ ಕೋಲಾರ ಪ್ರವಾಸ ರದ್ದು ಮಾಡಲಾಗಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಇಂದು ಹೆಚ್​ಡಿಕೆ ಅವರು ರೈತರ ಜಮೀನುಗಳಿಗೆ ಭೇಟಿ ಕಾರ್ಯಕ್ರಮ ನಿಗದಿಯಾಗಿತ್ತು.

ರಾಜ್ಯ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭದಲ್ಲಿಯೂ ಕುಮಾರಸ್ವಾಮಿಯವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ದಾಖಲಾಗಿದ್ದರು.

Exit mobile version