Site icon PowerTV

ನಾನು ರಾಜಕೀಯದಿಂದ ಹೆಜ್ಜೆ ಹೊರಗೆ ಇಟ್ಟಿಲ್ಲ : ನಿಖಿಲ್ ಸ್ಪಷ್ಟನೆ

ಬೆಂಗಳೂರು : ಚುನಾವಣೆ ಸೋಲಿನ ಬಳಿಕ ರಾಜಕೀಯದಿಂದ ನಿಖಿಲ್ ಕುಮಾರಸ್ವಾಮಿ ದೂರ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ನಿಖಿಲ್ ಅವರೇ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ ಎಂದು ಹೇಳಿದ್ದಾರೆ.

ಮಾಧ್ಯಮದಲ್ಲಿ ನಿನ್ನೆ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ನಾನು ಜವಾಬ್ದಾರಿಯನ್ನು ಅರಿತಿದ್ದೇನೆ. ಚುನಾವಣೆಯ ಸೋಲು ತಾತ್ಕಾಲಿಕ. ಜನರು ನನಗೆ ಸದಾ ಕಾಲ ಪ್ರೀತಿ, ವಿಶ್ವಾಸ, ಗೌರವದಲ್ಲಿ ಎಂದೂ ಕೊರತೆ ಮಾಡಿಲ್ಲ. ಸಮಯ, ಸಂದರ್ಭ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ ಎಂದಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಗಳ ಪುತ್ರ ಎನ್ನುವುದು ಒಂದು ಭಾಗವಾದರೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದ. ಆ ಸ್ಥಾನ ಕೊಟ್ಟಿರುವ ಸಮಸ್ತ ಕಲಾಭಿಮಾನಿಗಳಿಗೆ ನಾನು ಎಂದೆಂದಿಗೂ ಚಿರಋಣಿ ಎಂದು ಹೇಳಿದ್ದಾರೆ.

ಪ್ರಶ್ನೆಗೆ ನಾನೇ ಉತ್ತರ ನೀಡ್ತಿನಿ

ಇಲ್ಲಿಯವರೆಗೂ ನನ್ನ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದೆಯೂ ನಾನು ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನು ಮಾಡುವವನಿದ್ದೇನೆ. ಕೊನೆಯದಾಗಿ ಎಲ್ಲಾ ಮಾಧ್ಯಮದ ಮಿತ್ರರಿಗೆ ರಾಜಕಾರಣ ಮತ್ತು ಸಿನಿಮಾದ ವಿಚಾರವಾಗಿ ನನಗೆ ಸಂಬಂಧಿಸಿದ ವಿಷಯಗಳಿದ್ದರೆ ಆ ಪ್ರಶ್ನೆಗಳಿಗೆ ನಾನೇ ಉತ್ತರ ನೀಡಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

Exit mobile version