Site icon PowerTV

ಇಡೀ ದೇಶದಲ್ಲಿ ಕರ್ನಾಟಕ ಮಾದರಿ ಅಂತ ತೋರಿಸಿದ್ದೇವೆ : ಡಿ.ಕೆ ಶಿವಕುಮಾರ್

ಮೈಸೂರು : ಇಡೀ ದೇಶದಲ್ಲಿ ಕರ್ನಾಟಕ ಮಾದರಿ ಎಂಬುವುದನ್ನು ಕಾಂಗ್ರೆಸ್​ ಸರ್ಕಾರ ಸಾಬೀತು ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಬದಲಾವಣೆಯ ಗಾಳಿ ಬೀಸಿದೆ ಎಂದರು.

ಇದೇ ಭೂಮಿ ಮೇಲೆ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಭಾರತ್​ ಜೋಡೋ ಯಾತ್ರೆ ವೇಳೆ ಜನ ಎಲ್ಲಾ ಸಮಸ್ಯೆ ಹೇಳಿಕೊಂಡಿದ್ದರು. ನಮ್ಮ ಸರ್ಕಾರ ಬಂದು 100 ದಿನ ಆಗಿದೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ತಿಳಿಸಿದರು.

ಇದು ಕಾಂಗ್ರೆಸ್​ ಗ್ಯಾರಂಟಿ

ಚುನಾವಣೆ ಎದುರಿಸುವಾಗ ರಾಜ್ಯದ ಜನತೆಗೆ ನಾವು ಐದು ವಾಗ್ದಾನ ಕೊಟ್ಟಿದ್ದೆವು. ನಮಗೆ ಜನತೆ ಅಧಿಕಾರ ಕೊಟ್ಟಿದ್ದಾರೆ. ಅದರಂತೆ ನಾವು ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ. 100 ದಿನದಲ್ಲಿ ನಾಲ್ಕು ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಈ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿದೆ. ಇದು ಕಾಂಗ್ರೆಸ್​ ಗ್ಯಾರಂಟಿ ಎಂದರು.

1.10 ಕೋಟಿ ಫಲಾನುಭವಿಗಳು

ನಾನು ಹಾಗೂ ಸಿದ್ದರಾಮಯ್ಯನವರು ನಮ್ಮ ನಾಡ ದೇವತೆಗೆ ನಮಿಸಿದ್ದೇವು. ಘೋಷಣೆ ಮಾಡಿದಂತೆ 5 ಗ್ಯಾರಂಟಿ ಯೋಜನೆ ಜಾರಿ ಮಾಡುತ್ತಿದ್ದೇವೆ. ಬೆಳಗಾವಿಯಲ್ಲಿ ಗೃಹಜ್ಯೋತಿ ಯೋಜನೆ ಘೋಷಣೆ ಮಾಡಿದ್ದೆವು. ಬಳಿಕ ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆ ಘೋಷಣೆ ಮಾಡಿದ್ದೆವು. ಇದೀಗ ಗೃಹಜ್ಯೋತಿ ಜಾರಿ ಮಾಡಿದ್ದೇವೆ. 1.10 ಕೋಟಿ ಫಲಾನುಭವಿಗಳು ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

Exit mobile version