Site icon PowerTV

ರಕ್ಷಾ ಬಂಧನ ಆಚರಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಮೈಸೂರಿನಲ್ಲಿ ತಮ್ಮ ಸಹೋದರ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ರಕ್ಷಾಬಂಧನ ಆಚರಿಸಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.

ಇಂದು ರಕ್ಷಾಬಂಧನ ಆಚರಣೆ ಇರುವ ಹಿನ್ನೆಲೆ ಇಂದು ಮೈಸೂರಿನಲ್ಲಿ ಸಹೋದರ ಎಂ ಎಲ್ ಸಿ ಚನ್ನರಾಜ್ ಹಟ್ಟಿಹೊಳಿ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಕ್ಷಾ ಬಂಧನ ಆಚರಿಸಿಕೊಂಡಿದ್ದಾರೆ.

ಇದನ್ನು ಓದಿ : ಖ್ಯಾತ ಸಂಗೀತ ನಿರ್ದೇಶಕನಿಗೆ ಅಭಿನಂದಿಸಿದ ಕೆ.ಗೋಪಾಲಯ್ಯ

ಅಷ್ಟೇ ಅಲ್ಲದೆ ಟ್ವಿಟ್ಟರ್​ನಲ್ಲಿ ರಕ್ಷಾ ಬಂಧನ ಆಚರಣೆ ಬಗ್ಗೆ ಪೋಟೋ ಹಾಕಿ ಸಚಿವೆ ತಮ್ಮ ಖುಷಿಯನ್ನು ವ್ಯಕ್ತಪಡಿಸಿಕೊಂಡಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮದ ನಿಮಿತ್ಯ ಮೈಸೂರಿನಲ್ಲಿ ಇರಬೇಕಾದ ಅನಿವಾರ್ಯತೆ ಬಂದಿದೆ.

ಆದ್ದರಿಂದ ಮೈಸೂರಿನಲ್ಲಿಯೇ ನನ್ನ ಸಹೋದರ, ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ಅಧಿಕಾರಿಗಳಿಗೆ ಮತ್ತು ನಮ್ಮ ಸಿಬ್ಬಂದಿ ವರ್ಗದವರಿಗೆ ರಾಖಿ ಕಟ್ಟುವ ಮೂಲಕ ಸಾಂಕೇತಿಕವಾಗಿ ರಕ್ಷಾ ಬಂಧನ ಆಚರಿಸಿದ್ದೇನೆ. ಆದರೆ ನನ್ನ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರೊಂದಿಗೆ ರಕ್ಷಾ ಬಂಧನ ಕಾರ್ಯಕ್ರಮವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

Exit mobile version