Site icon PowerTV

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಶ್ರೀಗಳು!

ಬೆಂಗಳೂರು: ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.

ಬಳಿಕ ಮಾದ್ಯಮ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ತುಂಬಾ ಚೆನ್ನಾಗಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಚೇತರಿಕೆಯಾಗಿದ್ದು ಯಾವುದೇ ತೊಂದರೆ ಇಲ್ಲ. ಚಿಕಿತ್ಸೆಗೆ ಸ್ಪಂದಿಸಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಸಿ ಯು ಇಂದ ವಾರ್ಡಗೆ ಶಿಫ಼್ಟ್ ಮಾಡುತ್ತಾರೆ. ಕೆಲ ದಿನ ವಿಶ್ರಾಂತಿ ಪಡೆಯುವಂತೆ ಸಲಹೆ ಕೊಟ್ಟಿದ್ದೇನೆಎಂದರು.

ಇದನ್ನೂ ಓದಿ: ಮದುವೆ ಊಟ ಮಾಡಿ ದೃಷ್ಟಿ ಕಳೆದುಕೊಂಡ ವ್ಯಕ್ತಿ!

ತೀವ್ರ ಜ್ವರದಿಂದ ನಿನ್ನೆ ಬೆಳಗ್ಗೆ 3:40ಕ್ಕೆ ಹೆಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ ಡಿ ಕೆ ಆರೋಗ್ಯ ವಿಚಾರಿಸಲು ಅವರ ಕುಟುಂಬದವರು ಹಾಗೂ ಹಿತೈಶಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.

Exit mobile version